Home ಸುದ್ದಿ ಗಂಗಾವತಿ ಕಲ್ಮಠದಲ್ಲಿ ಜುಲೈ 27 ರಿಂದ ಶ್ರೀ ಕೊಟ್ಟೂರೇಶ್ವರ ಮಹಾಶಿವಯೋಗಿಗಳವರ 105ನೇ ಸ್ಮರಣೋತ್ಸವ ಹಾಗೂ ಪುರಾಣ ಪ್ರವಚನ ಸಮಾರಂಭ.
ಸುದ್ದಿ

ಗಂಗಾವತಿ ಕಲ್ಮಠದಲ್ಲಿ ಜುಲೈ 27 ರಿಂದ ಶ್ರೀ ಕೊಟ್ಟೂರೇಶ್ವರ ಮಹಾಶಿವಯೋಗಿಗಳವರ 105ನೇ ಸ್ಮರಣೋತ್ಸವ ಹಾಗೂ ಪುರಾಣ ಪ್ರವಚನ ಸಮಾರಂಭ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿಯ : ಇತಿಹಾಸ ಪ್ರಸಿದ್ಧ ಕಲ್ಮಠದಲ್ಲಿ ಲಿಂಗೈಕ್ಯ ಶ್ರೀ ಕೊಟ್ಟೂರೇಶ್ವರ ಮಹಾಶಿವಯೋಗಿಗಳವರ 105ನೇ ವರ್ಷದ ಸ್ಮರಣೋತ್ಸವ, ಶ್ರೀ ಚನ್ನಬಸವ ಶಿವಯೋಗಿಗಳವರ ಪುರಾಣ ಪ್ರವಚನ ಹಾಗೂ ಶರಣ ಸಂಸ್ಕೃತಿ ಸಮಾರಂಭವು ಇದೇ ಜುಲೈ 27ರ ಸೋಮವಾರದಿಂದ ಆಗಸ್ಟ್ 6ರ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮಿಗಳು ತಿಳಿಸಿದ್ದಾರೆ.

ಜುಲೈ 27ರ ಸೋಮವಾರ ಬೆಳಿಗ್ಗೆ 9:00 ಗಂಟೆಗೆ ಕಂಪ್ಲಿ ಕಲ್ಮಠದ ಅಭಿನವ ಪ್ರಭು ಮಹಾಸ್ವಾಮಿಗಳವರಿಂದ ಷಟ್‌ಸ್ಥಳ ಧ್ವಜಾರೋಹಣ ನೆರವೇರಲಿದೆ. ಪ್ರತಿದಿನ ಸಂಜೆ 7:30 ರಿಂದ ರಾತ್ರಿ 9:00 ಗಂಟೆಯವರೆಗೆ ಪುರಾಣ ಪ್ರವಚನ ಪ್ರವೀಣ ಪಂಡಿತ ಶಿವರಾಜ್ ಶಾಸ್ತ್ರಿಗಳವರಿಂದ ಶ್ರೀ ಚನ್ನಬಸವ ಶಿವಯೋಗಿಗಳವರ ಪುರಾಣ ಪ್ರವಚನ ಜರುಗಲಿದೆ.

ವಿಶ್ವ ಧಾರ್ಮಿಕ ವ್ಯವಸ್ಥೆಯಲ್ಲಿ ವೀರಶೈವ ಧರ್ಮವು ವಿಶಿಷ್ಟ ಸ್ಥಾನಮಾನವನ್ನು ಹೊಂದಿದ್ದು, ಮಾನವನ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಗಂಗಾವತಿಯ ಈ ಪುಣ್ಯ ಭೂಮಿಯಲ್ಲಿ ಮಹಾಮಹಿಮರ ಜೀವನ ಸಾಧನೆ ಮತ್ತು ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

“ಮಾನವ ಧರ್ಮಕ್ಕೆ ಜಯವಾಗಲಿ” ಎಂಬ ದಿವ್ಯ ಸಂದೇಶವನ್ನು ಸಾರುವ ಈ ಸಮಾರಂಭದಲ್ಲಿ ಸಕಲ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗಬೇಕಾಗಿ ಡಾ. ಕೊಟ್ಟೂರು ಮಹಾಸ್ವಾಮಿಗಳು ವಿನಂತಿಸಿದ್ದಾರೆ.

Share
Related Articles
ಅಂಕಣಸುದ್ದಿ

ಜನರ ಜೀವ ಉಳಿಸಲು ಜಾಗತಿಕ ಔಷಧಿ ದೈತ್ಯರ ಎದರು ಸೆಟೆದು ನಿಂತ ಧೀರ ಅಧಿಕಾರಿ ಐಎಎಸ್ ಅಧಿಕಾರಿ ಪಿ.ಎಚ್. ಕುರಿಯನ್.

ಮರ್ಚೆಡ್ ಡೇಸ್ | ವಿಶೇಷ ಲೇಖನ: ಅಧಿಕಾರವೆಂದರೆ ಜನರ ಸೇವೆ ಎಂಬುದನ್ನು ಜಗತ್ತಿಗೆ ತೋರಿಸಿದ ಅಪರೂಪದ...

ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...