Home ಸುದ್ದಿ  ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿಜಯನಗರ ಹಠಾತ್ ಭೇಟಿ: ಕಮಿಷನ್ ವಸೂಲಿಗೆ ಬ್ರೇಕ್, ರೈತರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ.
ಸುದ್ದಿ

 ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿಜಯನಗರ ಹಠಾತ್ ಭೇಟಿ: ಕಮಿಷನ್ ವಸೂಲಿಗೆ ಬ್ರೇಕ್, ರೈತರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.|ವಿಜಯನಗರ.

ವಿಜಯನಗರ: ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ವೇಳೆ ದಲಾಲರು ರೈತರಿಂದ ಅಕ್ರಮವಾಗಿ ಕಮಿಷನ್ ಪಡೆಯುತ್ತಿದ್ದಾರೆಂಬ ದೂರಿಗೆ ತಕ್ಷಣ ಸ್ಪಂದಿಸಿದ ಅವರು, ರೈತರು ಯಾವುದೇ ಕಾರಣಕ್ಕೂ ಕಮಿಷನ್ ನೀಡಬಾರದು ಎಂದರು. ಅಲ್ಲದೆ, ರೈತರ ಕಣ್ಣಿಗೆ ಕಾಣುವಂತೆ ‘ಕಮಿಷನ್ ನೀಡುವುದು ಕಾನೂನುಬಾಹಿರ’ ಎಂಬ ಫಲಕವನ್ನು ತಕ್ಷಣವೇ ಅಳವಡಿಸಬೇಕು ಎಂದು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದರು.

ಇದೇ ವೇಳೆ ಮಾರುಕಟ್ಟೆಯಲ್ಲಿ ರೈತರಿಗೆ ತೂಕದಲ್ಲಿ ವಂಚನೆಯಾಗದಂತೆ ತಡೆಯಲು ಸ್ವತಃ ತೂಕದ ಯಂತ್ರದ ಮೇಲೆ ನಿಂತು ಅವರು ಪರಿಶೀಲನೆ ನಡೆಸಿದರು. ಶುದ್ಧ ಕುಡಿಯುವ ನೀರಿನ ಘಟಕದ ಅಸಮರ್ಪಕ ನಿರ್ವಹಣೆ ಕಂಡು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೀಘ್ರವೇ ಸಮಸ್ಯೆ ಸರಿಪಡಿಸಿ ಸಾರ್ವಜನಿಕರಿಗೆ ಸುಸಜ್ಜಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಎಚ್ಚರಿಕೆ ನೀಡಿದರು. ಜೊತೆಗೆ, ರಾತ್ರಿ ವೇಳೆ ಆಗಮಿಸುವ ರೈತರ ವಿಶ್ರಾಂತಿಗಾಗಿ ಕೂಡಲೇ ತಂಗುದಾಣ ನಿರ್ಮಿಸಲು ನಗರಸಭೆಗೆ ಸೂಚನೆ ನೀಡಿದರು.

ನಗರದ ಬಸ್ ನಿಲ್ದಾಣಕ್ಕೂ ಭೇಟಿ ನೀಡಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಲಗೇಜು ಕೊಠಡಿ, ಶೌಚಾಲಯ ಹಾಗೂ ಕಾಯುವ ಕೊಠಡಿಗಳನ್ನು ಪರಿಶೀಲಿಸಿದರು. ಅಂಗಡಿಗಳಲ್ಲಿ ಆಹಾರ ಪದಾರ್ಥಗಳನ್ನು ತಪಾಸಣೆ ನಡೆಸಿ, ನಿಗದಿತ ಗರಿಷ್ಠ ಮಾರಾಟ ಬೆಲೆಗಿಂತ (MRP) ಹೆಚ್ಚಿನ ದರ ವಸೂಲಿ ಮಾಡಬಾರದು ಹಾಗೂ ಅವಧಿ ಮುಗಿದ ಪದಾರ್ಥಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ವಿಜಯನಗರ ಕಾಲೇಜಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳ ಅಳಲಿಗೆ ಅವರು ತಕ್ಷಣವೇ ಸ್ಪಂದಿಸಿದರು. ಸ್ಥಳದಲ್ಲೇ ಇದ್ದ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೂಡಲೇ ವಿಜಯನಗರ ಕಾಲೇಜು ಮಾರ್ಗವಾಗಿ ನಗರ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ತಪಾಸಣೆಯ ವೇಳೆ ಲೋಕಾಯುಕ್ತ ಉಪನಿಬಂಧಕ ಅರವಿಂದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...