Home ಸುದ್ದಿ ಗಂಗಾವತಿಯಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಟ್ಟ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಮತ್ತು ರಾಜ್ಯಪಾಲರ ಪುರಸ್ಕಾರ ಪೂರ್ವಭಾವಿ ಶಿಬಿರ.
ಸುದ್ದಿ

ಗಂಗಾವತಿಯಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಟ್ಟ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಮತ್ತು ರಾಜ್ಯಪಾಲರ ಪುರಸ್ಕಾರ ಪೂರ್ವಭಾವಿ ಶಿಬಿರ.

Share
Share

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ:ನಗರದ ಕೇಂದ್ರ ಹಿರಿಯ ಪ್ರಾಥಮಿಕ ಸಿಪಿಎಸ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಗಂಗಾವತಿ ವತಿಯಿಂದ, ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ವೇಳೆ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ರಾಜ್ಯಪಾಲರ ಪುರಸ್ಕಾರಕ್ಕಾಗಿ ಹಮ್ಮಿಕೊಂಡಿರುವ 2026-27ನೇ ಸಾಲಿನ ಪೂರ್ವಭಾವಿ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಎಚ್.ಎಂ. ಸಿದ್ದರಾಮಯ್ಯ ಸ್ವಾಮಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಸರಸ್ವತಿ ಜೂಡಿ, ಸ್ಕೌಟ್ಸ್ ಜಿಲ್ಲಾ ಆಯುಕ್ತರಾದ ಮಲ್ಲಿಕಾರ್ಜುನ ಚೌಕಿಮಠ, ಜಿಲ್ಲಾ ಗೈಡ್ಸ್ ಆಯುಕ್ತರಾದ ಅರುಣ ವಸ್ತ್ರದ ಹಾಗೂ ಕಾರ್ಗಿಲ್ ಯೋಧರಾದ ಬಸವಂತಪ್ಪ ಉಪಸ್ಥಿತರಿದ್ದರು.

ಇದಲ್ಲದೆ, ಡಿಟಿಸಿ ಗೈಡ್ ಶ್ರೀಮತಿ ಸರೋಜಾ, ಎಡಿಸಿ ಸ್ಕೌಟ್ ಎ.ರಣ್ಣ, ಸ್ಕೌಟ್ ಮಾಸ್ಟರ್ ಬಸವರಾಜ್, ಗೈಡ್ ಕ್ಯಾಪ್ಟನ್ ಕುಮಾರಿ ಕಾಜಲ್, ಗರ್ಲ್ ಟೀಚರ್ ಕವಿತಾ, ರೇಂಜರ್ ಲೀಡರ್ ಶ್ರೀದೇವಿ ತಟ್ಟಿ, ಗೈಡ್ ಕ್ಯಾಪ್ಟನ್ ಶೋಭಾ, ಸ್ಕೌಟ್ ಮಾಸ್ಟರ್ ಶ್ರೀನಿವಾಸ ಹಾಗೂ ಗಂಗಾವತಿ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಹುಸೇನ್ ಸಾಬ್ ಮಾಕಂಧಾರ್ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಪ್ರಮುಖ ಹಂತದಲ್ಲಿ, ದೇಶಕ್ಕಾಗಿ ಹೋರಾಡಿದ ಕಾರ್ಗಿಲ್ ಯೋಧರಾದ  ಬಸವಂತಪ್ಪ (ದೈಹಿಕ ಶಿಕ್ಷಕರು) ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ವಿಶೇಷ ಶಿಬಿರದಲ್ಲಿ ರಾಜ್ಯಪಾಲರ ಪುರಸ್ಕಾರ ಪ್ರಶಸ್ತಿಗಾಗಿ ಆಗಮಿಸಿದ್ದ ಸುಮಾರು 70ಕ್ಕೂ ಹೆಚ್ಚು ಉತ್ಸಾಹಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಕ್ರಿಯವಾಗಿ ಭಾಗವಹಿಸಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...