Home ಸುದ್ದಿ ಗುದ್ದಲಿ ಪೂಜೆ ಮಾಡಿ ವರ್ಷಗಟ್ಟಲೆ ಕಳೆದರೂ ಕೃಪೆಗೆ ಸಿಗದ ಸೇತುವೆ: ಗಂಜಳ್ಳಿ-ಶಕ್ತಿನಗರ ಮಾರ್ಗದ ಹಳ್ಳದ ಸೇತುವೆ ಕಾಮಗಾರಿ ಯಾವಾಗ ಆರಂಭ.
ಸುದ್ದಿ

ಗುದ್ದಲಿ ಪೂಜೆ ಮಾಡಿ ವರ್ಷಗಟ್ಟಲೆ ಕಳೆದರೂ ಕೃಪೆಗೆ ಸಿಗದ ಸೇತುವೆ: ಗಂಜಳ್ಳಿ-ಶಕ್ತಿನಗರ ಮಾರ್ಗದ ಹಳ್ಳದ ಸೇತುವೆ ಕಾಮಗಾರಿ ಯಾವಾಗ ಆರಂಭ.

Share
Share

 

ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು: ತಾಲ್ಲೂಕಿನ ಗಂಜಳ್ಳಿ ಗ್ರಾಮದಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಹಳ್ಳದ ಸೇತುವೆ ಹಾಗೂ ರಸ್ತೆ ಕಾಮಗಾರಿಯು ಗುದ್ದಲಿ ಪೂಜೆ ಮಾಡಿ ವರ್ಷಗಟ್ಟಲೆ ಕಳೆದರೂ ಇನ್ನೂ ಪೂರ್ಣಗೊಳ್ಳದೆ, ಸ್ಥಳೀಯರು ಪ್ರತಿದಿನ ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಕೃಷ್ಣಾ ನದಿ ತೀರಕ್ಕೆ ಹೊಂದಿಕೊಂಡಿರುವ ಈ ಗ್ರಾಮವು ಸಂಪೂರ್ಣ ನೀರಾವರಿ ಪ್ರದೇಶವಾಗಿದ್ದು, ರೈತರು ತಮ್ಮ ಗದ್ದೆಗಳಿಗೆ ತೆರಳಲು ಮತ್ತು ಸಾರ್ವಜನಿಕರು ನಿತ್ಯದ ಓಡಾಟಕ್ಕೆ ಭಾರೀ ತೊಂದರೆ ಅನುಭವಿಸುತ್ತಿದ್ದಾರೆ.

ನೆನೆಗುದಿಗೆ ಬಿದ್ದ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ವರ್ಷಗಳೇ ಕಳೆದಿದ್ದರೂ, ಹಳ್ಳದ ಸೇತುವೆ ಹಾಗೂ ರಸ್ತೆ ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ.

ಮಳೆಗಾಲದಲ್ಲಿ ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಆಸ್ಪತ್ರೆಗೆ ಹೋಗುವ ರೋಗಿಗಳು, ವೃದ್ಧರು, ಕೆಪಿಟಿಸಿಎಲ್ (ಆರ್ ಟಿ ಪಿ ಎಸ್) ಹಾಗೂ ಇತರೆ ಕಾರ್ಮಿಕರು ಜೀವದ ಹಂಗು ತೊರೆದು ನಿತ್ಯ ಇದೇ ಮಾರ್ಗದಲ್ಲಿ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಗಂಜಳ್ಳಿಯಿಂದ ಶಕ್ತಿನಗರಕ್ಕೆ ನಿತ್ಯವೂ ಪ್ರಯಾಣಿಸುವ ಕೂಲಿ ಕಾರ್ಮಿಕರು ಮತ್ತು ಸಾರ್ವಜನಿಕರು ಈ ಕಳಪೆ ವ್ಯವಸ್ಥೆ ಹಾಗೂ ತಾಪತ್ರಯಗಳಿಂದ ನೊಂದು ಬೆಂದ ಹೋಗಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮಾನ್ಯ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡದೆ, ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗಂಜಳ್ಳಿ ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...