Home ಸುದ್ದಿ ಮನಸ್ಸಿಗೆ ನೆಮ್ಮದಿ ನೀಡುವ ದಿವ್ಯ ಪರ್ವ: ಗಂಗಾವತಿಯ ಸಾಯಿನಗರದಲ್ಲಿ 26ನೇ ವರ್ಷದ ಗುರು ಪೂರ್ಣಿಮಾ ವೈಭವ.
ಸುದ್ದಿ

ಮನಸ್ಸಿಗೆ ನೆಮ್ಮದಿ ನೀಡುವ ದಿವ್ಯ ಪರ್ವ: ಗಂಗಾವತಿಯ ಸಾಯಿನಗರದಲ್ಲಿ 26ನೇ ವರ್ಷದ ಗುರು ಪೂರ್ಣಿಮಾ ವೈಭವ.

Share
Share

 

 

 

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಕಲಿಯುಗದ ಕಾಮಧೆನು ಸಾಯಿ ದರ್ಶನ: ಹತ್ತು ಸಾವಿರ ಭಕ್ತರಿಗೆ ಮಹಾಪ್ರಸಾದದ ದಾಸೋಹ.

ಗಂಗಾವತಿ : ನಗರದ ಸಾಯಿನಗರದಲ್ಲಿರುವ 26ನೇ ವರ್ಷದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಗುರು ಪೂರ್ಣಿಮಾ ಅಂಗವಾಗಿ ಬುಧವಾರ ವಿಶಿಷ್ಟ ಹಾಗೂ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಲೋಕಕಲ್ಯಾಣ, ರಾಜ್ಯದಲ್ಲಿ ಮಳೆ-ಬೆಳೆ ಸಮೃದ್ಧಿ ಮತ್ತು ಜನರ ಸುಖ-ಶಾಂತಿಗಾಗಿ ಈ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಿ. ರಾಮಕೃಷ್ಣ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 5.15ಕ್ಕೆ ಕಾಕಡ ಆರತಿಯೊಂದಿಗೆ ಧಾರ್ಮಿಕ ವಿಧಿ-ವಿಧಾನಗಳು ಆರಂಭವಾಗಲಿದ್ದು, ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ಆಕರ್ಷಕ ಹೂವಿನ ಅಲಂಕಾರ, ನವಗ್ರಹ ದೋಷ ಪರಿಹಾರ ಪಾರಾಯಣ ಹಾಗೂ ಸಾಯಿ ಪಾಲಕಿ ಉತ್ಸವ ಜರುಗಲಿದೆ. ಇದರೊಂದಿಗೆ ಭಜನಾ ಕಾರ್ಯಕ್ರಮ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗವಿರಲಿದ್ದು, ಗುರು ಪೂರ್ಣಿಮೆಯ ಮುಖೇನ ಬೆಳಗ್ಗಿನಿಂದ ಸಂಜೆಯವರೆಗೆ ಒಟ್ಟು ಐದು ಮಹಾ ಆರತಿಗಳು ನೆರವೇರಲಿವೆ.

ಕಲಿಯುಗದಲ್ಲಿ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಶಿರಡಿ ಸಾಯಿಬಾಬಾ ಅವರನ್ನು ದತ್ತಾತ್ರೇಯರ ಅವತಾರವೆಂದು ನಂಬಲಾಗಿದ್ದು, ದೇವಸ್ಥಾನದಲ್ಲಿ ‘ಶ್ರೀ ಸಾಯಿರಾಮ್ ಕೋಟಿ ಜಪ ಬರಹ’ ಮಹಾಸಂಕಲ್ಪಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಗುರು ಪೂರ್ಣಿಮೆಯೊಳಗೆ ಈ ಜಪ ಬರಹವನ್ನು ಪೂರ್ಣಗೊಳಿಸಿ ವಿಶೇಷ ಹೋಮದಲ್ಲಿ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ಅರ್ಚಕ ವೆಂಕಟೇಶ್ ಜೋಶಿ ಮಾಹಿತಿ ನೀಡಿದ್ದಾರೆ.

ಈ ಮಹೋತ್ಸವದ ನಿಮಿತ್ತ ಬರುವ ಅಪಾರ ಸಂಖ್ಯೆಯ ಭಕ್ತಾದಿಗಳ ಅನುಕೂಲಕ್ಕಾಗಿ ಸುಮಾರು 10,000 ಜನರಿಗೆ ಮಹಾಪ್ರಸಾದ ಹಾಗೂ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಬಾಬಾರ ಕೃಪಾಶೀರ್ವಾದಕ್ಕೆ ಪಾತ್ರರಾಗುವಂತೆ ದೇವಸ್ಥಾನ ಸಮಿತಿಯ ಪ್ರಮುಖರು ಮನವಿ ಮಾಡಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...