ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ : ನಗರದ ಶ್ರೀ ಚೆನ್ನಬಸವ ಕ್ರೀಡಾಂಗಣದಲ್ಲಿ ಜುಲೈ 27ರಂದು ನಡೆದ ತಾಲೂಕು ಮಟ್ಟದ 17 ವರ್ಷದೊಳಗಿನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಧ್ಯಾನ್, ನಿವೇದಿ ಪಾಟೀಲ್, ವೈಭವ್ ಅಳವಂಡಿ, ವಿಶ್ವರಾಧ್ಯ ಹಾಗೂ ಕಾರ್ತಿಕ್ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಇವರ ಈ ಅದ್ಭುತ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರು ಅವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಇದೇ ರೀತಿಯ ಶ್ರೇಷ್ಠ ಪ್ರದರ್ಶನ ನೀಡಿ ಶಾಲೆ ಹಾಗೂ ಗಂಗಾವತಿ ತಾಲೂಕಿಗೆ ಕೀರ್ತಿ ತರಬೇಕೆಂದು ಶುಭ ಹಾರೈಸಿದರು. ಹಾಗೆಯೇ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ಗುರು ಅವರು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ, ಕ್ರೀಡೆಯೊಂದಿಗೆ ಶಿಕ್ಷಣದಲ್ಲೂ ಸಾಧನೆ ಮಾಡುವಂತೆ ಪ್ರೇರೇಪಿಸಿದರು. ಅಲ್ಲದೆ, ಕಠಿಣ ಅಭ್ಯಾಸ ಹಾಗೂ ಪರಿಶ್ರಮದಿಂದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲೂ ಯಶಸ್ಸು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ವ್ಯವಸ್ಥಿತವಾದ ಸಿಸ್ತು ಮತ್ತು ನಿರಂತರ ಶ್ರಮದ ಫಲವಾಗಿ ಬಂದಿರುವ ಈ ಸಾಧನೆಗೆ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಮುಂಬರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ಮತ್ತಷ್ಟು ಯಶಸ್ಸು ಗಳಿಸಿ ಎಂದು ಎಲ್ಲರೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ಕ್ರೀಡೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿರುವ ಮಹಾನ್ ಕಿಡ್ಸ್ ಶಾಲೆಯ ಈ ಹೆಮ್ಮೆಯ ಸಾಧನೆಯು, ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದು, ಶಾಲೆಯ ಕ್ರೀಡಾ ಚಟುವಟಿಕೆಗಳ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.