Home ಸುದ್ದಿ ಕನಕಗಿರಿ ಪ.ಪಂ. ಮುಖ್ಯಾಧಿಕಾರಿ ಲಂಚಾವತಾರ: 7 ದಿನದೊಳಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಎಚ್ಚರಿಕೆ.
ಸುದ್ದಿ

ಕನಕಗಿರಿ ಪ.ಪಂ. ಮುಖ್ಯಾಧಿಕಾರಿ ಲಂಚಾವತಾರ: 7 ದಿನದೊಳಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಎಚ್ಚರಿಕೆ.

Share
Share
ಮರ್ಚಡ್ ಡೇಸ್ ಸುದ್ದಿ|ಕನಕಗಿರಿ.

ಕನಕಗಿರಿ : ಪಟ್ಟಣ ಪಂಚಾಯಿತಿಯಲ್ಲಿ ಮುಖ್ಯಾಧಿಕಾರಿಯೊಬ್ಬರು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಕಚೇರಿಯಲ್ಲಿ ವ್ಯಾಪಕ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಪಟ್ಟಣದ ನಾಗರಿಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ತಹಶೀಲ್ದಾರರಾದ  ಚಂದ್ರಶೇಖರ್ ಗಾಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಈ ಕುರಿತು ವರದಿಗಳು ಪ್ರಕಟಗೊಂಡಿದ್ದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಹಾಗೂ ಮುಖ್ಯಾಧಿಕಾರಿಯನ್ನು ಅಮಾನತುಗೊಳಿಸದಿರುವುದನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ.

ಗುಂಟೆ ಭೂಮಿಗಳಿಗೆ ಲಂಚ ಪಡೆದುಕೊಂಡು ಅನಧಿಕೃತವಾಗಿ ‘ಫಾರಂ ನಂ-3’ ವಿತರಿಸಲಾಗುತ್ತಿದ್ದು, ಕೂಡಲೇ ಈ ದಾಖಲೆಗಳನ್ನು ರದ್ದುಪಡಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ. ನಗರ ಗ್ರಾಮಾಂತರ ಯೋಜನೆ ವ್ಯಾಪ್ತಿಗೆ ಬರುವ ನಿಖರ ಭೂಮಿಗಳಿಗೆ ಮಾತ್ರ ಫಾರಂ ನಂ-3 ನೀಡಬೇಕಾಗಿದ್ದು, ಲಂಚಕೋರರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭ್ರಷ್ಟಾಚಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕನಕಗಿರಿ ಜನತೆಗೆ ನ್ಯಾಯ ಒದಗಿಸಿಕೊಡಬೇಕೆಂದು ತಹಶೀಲ್ದಾರರಿಗೆ ಮನವಿ ಮಾಡಲಾಗಿದೆ.

ಜೊತೆಗೆ, ಕನಕಗಿರಿ ಪಟ್ಟಣ ಪಂಚಾಯತಿಯ ಎಲ್ಲಾ ವಿಭಾಗಗಳ ಹಾಲಿ ನೌಕರರನ್ನು ತಕ್ಷಣವೇ ಬೇರೆಡೆಗೆ ವರ್ಗಾಯಿಸಬೇಕು ಮತ್ತು ಆ ಸ್ಥಾನಗಳಿಗೆ ಹೊಸ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಮುಂದಿನ 07 ದಿನಗಳ ಒಳಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಒಂದು ವೇಳೆ ನಿಗದಿತ ಅವಧಿಯೊಳಗೆ ಭ್ರಷ್ಟ ಮುಖ್ಯಾಧಿಕಾರಿ ಮತ್ತು ಸಂಬಂಧಿತರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ, ಕನಕಗಿರಿಯ ಸಮಸ್ತ ನಾಗರಿಕರು ಒಗ್ಗೂಡಿ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ ಉಗ್ರ ಹೋರಾಟ ಹಾಗೂ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮನವಿ ಸಲ್ಲಿಕೆ ವೇಳೆ ಪಟ್ಟಣ ಪಂಚಾಯತ್ ಸದಸ್ಯರಾದ ಶೇಷಪ್ಪ ಪೂಜಾರ್, ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಅಯ್ಯನಗೌಡ ರೆಡ್ಡಿ ಅಳ್ಳಳ್ಳಿ, ಹನುಮಂತ ರೆಡ್ಡಿ, ಗೋಪಾಲರಡ್ಡಿ, ಬಸವರಾಜ್, ಯಮನೂರಪ್ಪ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...