ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.
ರಾಯಚೂರು: ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದ ನಿವಾಸಿ ನರಸಮ್ಮ (36) ಎಂಬ ಮಹಿಳೆಯು ಜೂನ್ 12ರಂದು ಬೆಳಿಗ್ಗೆ 11.30ರ ಸುಮಾರಿಗೆ ಮಗನನ್ನು ಶಾಲೆಯಿಂದ ಕರೆದುಕೊಂಡು ಬರುವುದಾಗಿ ಮನೆಯಿಂದ ತೆರಳಿದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಈ ಕುರಿತು ಕುಟುಂಬದವರ ದೂರಿನ ಮೇರೆಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 129/2026 ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ನಾಪತ್ತೆಯಾದ ಮಹಿಳೆಯು 36 ವರ್ಷ ವಯಸ್ಸಿನವರಾಗಿದ್ದು, ಅಂದಾಜು 5.0 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ, ದುಂಡು ಮುಖ ಹಾಗೂ ಕಪ್ಪು ಕೂದಲು ಹೊಂದಿದ್ದಾರೆ. ಕೂಲಿ ಕಾರ್ಮಿಕರಾದ ಇವರು ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಹೂವಿನ ಚಿತ್ರವಿರುವ ಸೀರೆ ಮತ್ತು ಕಪ್ಪು ಬಣ್ಣದ ಕುಪ್ಪಸ ಧರಿಸಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಈ ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಸಾರ್ವಜನಿಕರು ಪಿ.ಎಸ್.ಐ ರಾಯಚೂರು ಗ್ರಾಮೀಣ ಠಾಣೆ (9480803850), ಸಿಪಿಐ ಗ್ರಾಮೀಣ ವೃತ್ತ (9480803832), ಡಿಎಸ್ಪಿ ರಾಯಚೂರು (9480803820) ಅಥವಾ ರಾಯಚೂರು ಕಂಟ್ರೋಲ್ ರೂಮ್ (08532-235635) ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೋರಲಾಗಿದೆ.