ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ.
ಕನಕಗಿರಿ: ತಾಲೂಕಿನ ಸುತ್ತಮುತ್ತಲಿನ ವಿದ್ಯಾರ್ಥಿಗಳ ನೆಚ್ಚಿನ ವಿದ್ಯಾಸಂಸ್ಥೆಯಾಗಿ ಹೆಮ್ಮರವಾಗಿ ಬೆಳೆದಿರುವ ಬೆಸ್ಟ್ ಪಿಯು ಕಾಲೇಜ್ನಲ್ಲಿ, ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವರ್ಣರಂಜಿತ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನಕಗಿರಿಯ ಪ್ರಾಚಾರ್ಯರಾದ ಡಾ. ಬಜರಂಗಬಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ದಿವ್ಯ ಅಧ್ಯಕ್ಷತೆಯನ್ನು ಬೆಸ್ಟ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಶ್ರೀ ರಾಮಪ್ಪ ಟಿ. ಒಡೆಯರ್ ವಹಿಸಿದ್ದರು.
ವೇದಿಕೆಯಲ್ಲಿ ಗ್ಲೋಬಲ್ ಎಜುಕೇಶನ್ ಟ್ರಸ್ಟ್ನ ಉಪಾಧ್ಯಕ್ಷರಾದ ವಿಜಯ ಮಹಾಂತೇಶ್, ಟ್ರಸ್ಟ್ನ ಕಾರ್ಯದರ್ಶಿಗಳಾದ ಹುಸೇನ್ ಸಾಬ್ ಮೋದಿನ್ ಸಾಬ್, ಹಾಗೂ ಟ್ರಸ್ಟ್ನ ಪದಾಧಿಕಾರಿಗಳಾದ ಹುಸೇನ್ ಸಾಬ್ ಬಿಳಿಕುದುರೆ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮೇಘನಾ ಮತ್ತು ದುರ್ಗೇಶ್ ಅವರು ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ನಿರೂಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ನಿರ್ಮಲ ಹಾಗೂ ಶಾಂತಮ್ಮ ಅವರು ಆಗಮಿಸಿದ ಗಣ್ಯರನ್ನು ಮತ್ತು ನೂತನ ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.
ಕೈಲೂನ್ ಬಿ ಹಾಗೂ ಸಂಜನಾ ಅವರು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಈ ಸ್ವಾಗತ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ದಶರಥ್, ಶರಣಪ್ಪ, ಚಂದ್ರಶೇಖರ್, ಹನುಮೇಶ್, ಮಂಜುನಾಥ್, ಚೆನ್ನಮ್ಮ ಹಾಗೂ ಪವಿತ್ರ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸಾಥ್ ನೀಡಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ವಾತಾವರಣದ ಮೂಲಕ ಕನಕಗಿರಿ ತಾಲೂಕಿನಾದ್ಯಂತ ಹೆಮ್ಮೆಯ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಬೆಸ್ಟ್ ಪಿಯು ಕಾಲೇಜ್, ಈ ಬಾರಿಯೂ ನೂತನ ವಿದ್ಯಾರ್ಥಿಗಳನ್ನು ಅತ್ಯುತ್ಸಾಹದಿಂದ ಬರಮಾಡಿಕೊಳ್ಳುವ ಮೂಲಕ ಮತ್ತೊಮ್ಮೆ ತನ್ನ ಶೈಕ್ಷಣಿಕ ಬದ್ಧತೆಯನ್ನು ಮೆರೆಯಿತು.