Home ಸುದ್ದಿ ಬೋಧನಾ ವೃತ್ತಿಯ ಶ್ರೇಷ್ಠತೆಯ ಪ್ರತೀಕ ಪ್ರೊ. ರಾಜನಾಳ್ಕರ್ ಲಕ್ಷ್ಮಣ: ಗುಲಬರ್ಗಾ ವಿವಿ ಕುಲಪತಿ ಪ್ರೊ. ಶಶಿಕಾಂತ್ ಉಡಿಕೇರಿ ಬಣ್ಣನೆ.
ಸುದ್ದಿ

ಬೋಧನಾ ವೃತ್ತಿಯ ಶ್ರೇಷ್ಠತೆಯ ಪ್ರತೀಕ ಪ್ರೊ. ರಾಜನಾಳ್ಕರ್ ಲಕ್ಷ್ಮಣ: ಗುಲಬರ್ಗಾ ವಿವಿ ಕುಲಪತಿ ಪ್ರೊ. ಶಶಿಕಾಂತ್ ಉಡಿಕೇರಿ ಬಣ್ಣನೆ.

Share
Share
ಮರ್ಚೇಡ್ ಡೇಸ್ ಸುದ್ದಿ|ಕಲಬುರಗಿ.

ಕಲಬುರಗಿ : ಪರಿಪೂರ್ಣ ವ್ಯಕ್ತಿತ್ವದೊಂದಿಗೆ  ಬೋಧನಾ ವೃತ್ತಿ ಪರಂಪರೆಯ  ಶ್ರೇಷ್ಠತೆಯನ್ನು ಹೆಚ್ಚಿಸಿ ವಾಣಿಜ್ಯ  ಮತ್ತು ವ್ಯವಹಾರ ಕ್ಷೇತ್ರಕ್ಕೆ ಅಪಾರ ಕೊಡುಗೆ  ನೀಡಿದವರು  ಪ್ರೊ.ರಾಜನಾಳ್ಕರ್ ಲಕ್ಷ್ಮಣ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಅಭಿಪ್ರಾಯಪಟ್ಟಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರ ವಯೋನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸುಮಾರು ನಾಲ್ಕು ದಶಕಗಳಿಂದ ವಿಶ್ವವಿದ್ಯಾಲಯದ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಿರುವ ಅವರು, ೨೬ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಮತ್ತು ೧೭ ವಿದ್ಯಾರ್ಥಿಗಳಿಗೆ ಎಂ.ಫಿಲ್ ಪದವಿಗೆ ಮಾರ್ಗದರ್ಶನ ಮಾಡಿದ್ದಾರೆ. ಕುಲಪತಿ, ಕುಲಸಚಿವ, ವಿತ್ತಾಧಿಕಾರಿ ಹಾಗೂ ಸಿಂಡಿಕೇಟ್ ಸದಸ್ಯರಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿರುವ ಇವರ ಸರಳತೆ ಮತ್ತು ಮಾನವೀಯ ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದರು.

ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವಿಶ್ರಾಂತ ಡೀನ್ ಡಾ. ಜಿ.ಟಿ. ಗೋವಿಂದಪ್ಪ ಮಾತನಾಡಿ, ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ವಾಣಿಜ್ಯ ವಿಭಾಗದಲ್ಲಿ ಸ್ವಂತ ಕಟ್ಟಡ, ಆಧುನಿಕ ಕೊಠಡಿಗಳು ಮತ್ತು ಸ್ಮಾರ್ಟ್ ಕ್ಲಾಸ್ ರೂಂಗಳನ್ನು ನಿರ್ಮಿಸಿ ಮಾದರಿಯಾಗಿದ್ದಾರೆ ಎಂದರು. ಕುಲಸಚಿವ ಪ್ರೊ. ರಮೇಶ ಲಂಡನಕರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಇವರ ಜ್ಞಾನ ಪಾಂಡಿತ್ಯ ಮತ್ತು ತಾಳ್ಮೆ ಎಲ್ಲರಿಗೂ ಮಾದರಿ ಎಂದರು.

ಪ್ರೊ. ಎ.ಪಿ. ಹೊಸಮನಿ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರ, ಪ್ರೊ. ಸಿ. ಸುಲೋಚನಾ, ಪ್ರೊ. ಸಿ. ಬಸವರಾಜು, ಪ್ರೊ. ಬಿ. ವಿಜಯಾ, ಪ್ರೊ. ಬಿ.ಎಂ. ಕನ್ನಳ್ಳಿ ಹಾಗೂ ಇತರರು ಮಾತನಾಡಿದರು. ಹುಟ್ಟೂರಿನ ಹಿರಿಯರು, ಕುಟುಂಬದ ಸದಸ್ಯರು, ಹಳೆಯ ವಿದ್ಯಾರ್ಥಿಗಳು ಮತ್ತು ವಿವಿಧ ವಿವಿಗಳ ಪ್ರಾಧ್ಯಾಪಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕು. ವಿಜಯಲಕ್ಷ್ಮಿ, ಡಾ. ಅನುಥಾಮಸ್, ಡಾ. ವಿಜಯ ಅನಿಸಿಕೆ ಹಂಚಿಕೊಂಡರು. ಅಪರ್ಣ ಅತಿಥಿ ಪರಿಚಯ ಮಾಡಿಕೊಟ್ಟರೆ, ಡಾ. ನಿವೇದಿತಾ ವಂದಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸಂಗೀತ ವಿಭಾಗದ ಡಾ. ಲಕ್ಷ್ಮಿ ಶಂಕರ್ ಜೋಶಿ, ಡಾ. ಜಯದಾನಮ್ಮ ಹಾಗೂ ಸಂಗಡಿಗರು ಪ್ರಾರ್ಥನೆ ಮತ್ತು ನಾಡಗೀತೆ ಪ್ರಸ್ತುತಪಡಿಸಿದರು. ಕೊನೆಯಲ್ಲಿ ಪ್ರೊ. ಲಕ್ಷ್ಮಣ ಅವರ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು.

ವಿದ್ಯಾರ್ಥಿಗಳ ಪ್ರೀತಿ ಮತ್ತು ವಿಶ್ವಾಸವೇ ನನ್ನ ದೊಡ್ಡ ಆಸ್ತಿ ಕುಗ್ರಾಮವೊಂದರಲ್ಲಿ ತಳಮಟ್ಟದ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸೋದರ ಮಾವ ಶಿವಕುಮಾರ್ ಮತ್ತು ನನ್ನ ಕುಟುಂಬದ ಸದಸ್ಯರ ಪ್ರೋತ್ಸಾಹ ನನ್ನನ್ನು ಎತ್ತರಕ್ಕೆ ಬೆಳೆಸಿದೆ. ಡಾ. ಪ್ರಭಾಕರ್ ಮತ್ತು ಡಾ. ಬೋಗಪ್ಪ ಅವರ ಮಾರ್ಗದರ್ಶನ ನನ್ನನ್ನು ವಿಶ್ವವಿದ್ಯಾಲಯದ ಮಟ್ಟಕ್ಕೆ ತಂದು ನಿಲ್ಲಿಸಿತು. ವಿಶ್ವವಿದ್ಯಾಲಯ ನನಗೆ ಹೆಚ್ಚು ಅವಕಾಶ ನೀಡಿ ಬೆಳೆಸಿದೆ; ಇದಕ್ಕೆ ನಾನು ಸದಾ ಚಿರಋಣಿಯಾಗಿರುವೆ.

— ಪ್ರೊ. ರಾಜನಾಳ್ಕರ್ ಲಕ್ಷ್ಮಣ (ಪ್ರಾಧ್ಯಾಪಕರು).
ಪ್ರೊ. ರಾಜನಾಳ್ಕರ್ ಲಕ್ಷ್ಮಣ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಲಿ

ವಾಣಿಜ್ಯ ವಿಭಾಗದಲ್ಲಿ ಸುಮಾರು ನಲವತ್ತು ವರ್ಷಗಳ ಸೇವೆ ಸಲ್ಲಿಸಿರುವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಿ ಅದರ ಅಧ್ಯಕ್ಷರಾಗಿ ನೇಮಿಸಿದರೆ, ಈ ಭಾಗದ ವಾಣಿಜ್ಯ ವಿದ್ಯಾರ್ಥಿಗಳಿಗೆ ಅವರ ಜ್ಞಾನ, ಅನುಭವ ಮತ್ತು ಸಂಶೋಧನೆಯ ಲಾಭ ಸಿಗಲಿದೆ. ವಿದ್ಯಾರ್ಥಿವೇತನ ನೀಡುವ ಮೂಲಕ ಯುವ ಜನತೆಯನ್ನು ಈ ಕ್ಷೇತ್ರದತ್ತ ಪ್ರೋತ್ಸಾಹಿಸಬೇಕಿದೆ.

— ಪ್ರೊ. ಶಶಿಕಾಂತ್ ಎಸ್. ಉಡಿಕೇರಿ (ಕುಲಪತಿಗಳು)
Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...