Home ಸುದ್ದಿ ಮಳೆಯಾಶ್ರಿತ ಬದುಕಿನ ದುರಂತ, ತೀರ್ಥಳ್ಳಿಯಲ್ಲಿ ಗುಡ್ಡ ಕುಸಿದು ಕೊಪ್ಪಳದ ಒಂದೇ ಕುಟುಂಬದ ಮೂವರು ಸಾವು.
ಸುದ್ದಿ

ಮಳೆಯಾಶ್ರಿತ ಬದುಕಿನ ದುರಂತ, ತೀರ್ಥಳ್ಳಿಯಲ್ಲಿ ಗುಡ್ಡ ಕುಸಿದು ಕೊಪ್ಪಳದ ಒಂದೇ ಕುಟುಂಬದ ಮೂವರು ಸಾವು.

Share
Share

 

ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ.

ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಕಕ್ಕರಗೋಳ ಗ್ರಾಮದಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದ ರೈತ ಕುಟುಂಬವೊಂದು, ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ತೆರಳಿದ್ದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಸುರಿದ ಭೀಕರ ಮಳೆಗೆ ಗುಡ್ಡ ಕುಸಿದು, ಅವರು ವಾಸವಿದ್ದ ಸೆಡ್ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಈ ದುರಂತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಮಲ್ಲಿಕಾರ್ಜುನ, (37) ಅವರ ಪತ್ನಿ ನಾಗವೇಣಿ(25) ಹಾಗೂ ಪುತ್ರ ಸಂತೋಷ (04) ಎಂದು ಗುರುತಿಸಲಾಗಿದೆ. ತಮ್ಮೂರಿನಲ್ಲಿ ಮಳೆಯಿಲ್ಲದೆ ಕೃಷಿ ಕೈಕೊಟ್ಟಿದ್ದರಿಂದ ಬದುಕನ್ನು ಕಟ್ಟಿಕೊಳ್ಳಲು ಕೂಲಿ ಕೆಲಸಕ್ಕಾಗಿ ನಾಲ್ಕು ದಿನಗಳ ಹಿಂದಷ್ಟೇ ಇವರು ತೀರ್ಥಹಳ್ಳಿಗೆ ತೆರಳಿದ್ದರು.

ದಿನವಿಡೀ ಕಷ್ಟಪಟ್ಟು ಕೆಲಸ ಮುಗಿಸಿ ರಾತ್ರಿ ಸುಸ್ತಾಗಿ ಮಲಗಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಈ ಭೀಕರ ದುರಂತ ಸಂಭವಿಸಿದೆ. ಪ್ರಕೃತಿಯ ಅಟ್ಟಹಾಸಕ್ಕೆ ನಿಷ್ಠೆಯಿಂದ ಬದುಕುತ್ತಿದ್ದ ಈ ಬಡ ಕೂಲಿ ಕಾರ್ಮಿಕರ ಕುಟುಂಬ ಅಸುನೀಗಿದ್ದು ಸ್ಥಳೀಯರಲ್ಲಿ ತೀವ್ರ ಆಘಾತಂಟು ಮಾಡಿದೆ.

ಮೃತರ ಸಾವಿನ ಸುದ್ದಿ ಕಕ್ಕರಗೋಳ ಗ್ರಾಮಕ್ಕೆ ತಲುಪುತ್ತಿದ್ದಂತೆಯೇ ಇಡೀ ಗ್ರಾಮದಲ್ಲಿ ತೀವ್ರ ಶೋಕ ಮಡುಗಟ್ಟಿದೆ. ಗ್ರಾಮಸ್ಥರು ಮೃತರ ಮನೆಯ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ತಮ್ಮ ಕಣ್ಣಮುಂದೆ ಬೆಳೆದ ಮಗ, ಸೊಸೆ ಹಾಗೂ ಮೊಮ್ಮಗನನ್ನು ಕಳೆದುಕೊಂಡು ದಿಕ್ಕುಹೋಚದಂತಾಗಿರುವ ಲಕ್ಷ್ಮಣ ಹಾಗೂ ಗೌರಮ್ಮ ಅವರ ಆಕ್ರಂದನ ಸ್ಥಳದಲ್ಲಿದ್ದ ಪ್ರತಿಯೊಬ್ಬರ ಕಣ್ಣಂಚಲ್ಲೂ ತೇರಸುವಂತೆ ಮಾಡಿದ್ದು, ಮನಕಲುಕುವಂತಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...