Home ಸುದ್ದಿ ಆಕಳಕುಂಪಿಯಲ್ಲಿ ಚಿರತೆ ಭೀತಿ, ರಾತ್ರಿ ವೇಳೆ ನಾಯಿಗಳೇ ಟಾರ್ಗೆಟ್, ಆತಂಕದಲ್ಲಿ ರೈತರು.
ಸುದ್ದಿ

ಆಕಳಕುಂಪಿಯಲ್ಲಿ ಚಿರತೆ ಭೀತಿ, ರಾತ್ರಿ ವೇಳೆ ನಾಯಿಗಳೇ ಟಾರ್ಗೆಟ್, ಆತಂಕದಲ್ಲಿ ರೈತರು.

Share
Share
ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ.

ಕನಕಗಿರಿ: ತಾಲೂಕಿನ ಕರಡೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಕಳಕುಂಪಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ದಿನದಿಂದ ದಿನಕ್ಕೆ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ರಾತ್ರಿ ವೇಳೆ ಹೊಲಗಳಲ್ಲಿ ಕಾವಲಿರುವ ಮೂಕಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸಿ ತಿನ್ನುತ್ತಿರುವುದು ಗ್ರಾಮಸ್ಥರು ಹಾಗೂ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ.

ಕಳೆದ  ಒಂದು  ತಿಂಗಳಿಂದ  ಆಕಳಕುಂಪಿಯಲ್ಲಿ ನಿರಂತರವಾಗಿ ನಾಯಿಗಳು ಚಿರತೆಗೆ ಬಲಿಯಾಗುತ್ತಿವೆ. ವಿಶೇಷವಾಗಿ ರಾತ್ರಿ 10 ರಿಂದ ಬೆಳಗಿನ ಜಾವ 4 ಗಂಟೆಯ ನಡುವಿನ ಅವಧಿಯಲ್ಲಿ ಈ ದಾಳಿಗಳು ನಡೆಯುತ್ತಿವೆ. ಬೆಳೆ ಕಾಯಲು ಹೊಲಗಳಲ್ಲಿ  ಕಟ್ಟಿಹಾಕಿದ್ದ  ನಾಯಿಗಳು ಮರುದಿನ ಬೆಳಿಗ್ಗೆ ಶವವಾಗಿ ಕಂಡುಬರುತ್ತಿರುವುದು ರೈತರ ನಿದ್ದೆಗೆಡಿಸಿದೆ.

ಮಂಗಳವಾರ ಬೆಳಗಿನ ಜಾವ ರೈತ ನಾಗೇಶ್ ಡಂಕನಕಲ್ ಅವರ ಜಮೀನಿನಲ್ಲಿ ಚಿರತೆಯೊಂದು ನಾಯಿಯ ಮೇಲೆ ದಾಳಿ ನಡೆಸಿ ಸಂಪೂರ್ಣವಾಗಿ ತಿಂದು ಹಾಕಿದೆ. ಸ್ಥಳದಲ್ಲಿ ಚಿರತೆಯ ದೊಡ್ಡ ಹೆಜ್ಜೆಗುರುತುಗಳು ಸ್ಪಷ್ಟವಾಗಿ ಪತ್ತೆಯಾಗಿದ್ದು, ಇದು ಚಿರತೆಯದ್ದೇ ದಾಳಿ ಎಂಬುದು ಖಚಿತಗೊಂಡಿದೆ. ಅಷ್ಟೇ ಅಲ್ಲದೆ, ಬೇಟೆಯಾಡಿದ ನಾಯಿಯನ್ನು ಸುಮಾರು ಒಂದು ಕಿಲೋಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿ ಕಲ್ಲಿನ ಗವಿಯೊಳಗೆ ಬಚ್ಚಿಟ್ಟಿರುವುದು ಸ್ಥಳೀಯರ ಆತಂಕವನ್ನು ಇಮ್ಮಡಿಗೊಳಿಸಿದೆ.

ಹಿಂದೆಂದೂ ಇಲ್ಲದ ರೀತಿಯಲ್ಲಿ ಈಗ ವಾರಕ್ಕೊಮ್ಮೆಯಾದರೂ ನಾಯಿಗಳು ಬಲಿಯಾಗುತ್ತಿದ್ದು, ರಾತ್ರಿ ಹೊಲಗಳಿಗೆ ಹೋಗಲು ರೈತರು ಭಯಪಡುವಂತಾಗಿದೆ. ವೆಂಕೋಬ, ನಿರುಪಾದಿ, ದೇವಣ್ಣ, ಜಗದೀಶ್ ಮತ್ತು ಗಾದೆಪ್ಪ ಸೇರಿದಂತೆ ಅನೇಕ ರೈತರು ಈ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಪರಸ್ಪರ ಎಚ್ಚರಿಕೆ ವಹಿಸುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ನಾಗೇಶ್ ಡಂಕನಕಲ್, ವೆಂಕೋಬ, ಗಾದೆಪ್ಪ, ನಿರುಪಾದಿ ಹಾಗೂ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ಮತ್ತು ಜಾನುವಾರುಗಳ ಜೀವಕ್ಕೆ ಕುತ್ತು ತರುತ್ತಿರುವ ಚಿರತೆಯನ್ನು ಕೂಡಲೇ ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಬಲವಾಗಿ ಆಗ್ರಹಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...