Home ಸುದ್ದಿ ಗಂಗಾವತಿಯಲ್ಲಿ ಧೂಳಿನ ಹಾವಳಿ ಹಾಗೂ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕರ ಆಕ್ರೋಶ: ರಸ್ತೆ ತಡೆ ನಡೆಸಿ ಪ್ರತಿಭಟನೆ.
ಸುದ್ದಿ

ಗಂಗಾವತಿಯಲ್ಲಿ ಧೂಳಿನ ಹಾವಳಿ ಹಾಗೂ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕರ ಆಕ್ರೋಶ: ರಸ್ತೆ ತಡೆ ನಡೆಸಿ ಪ್ರತಿಭಟನೆ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ : ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಧೂಳಿನ ಹಾವಳಿ ಹಾಗೂ ನಮೆಗಡಿಸಿಕೊಳ್ಳುತ್ತಿರುವ ರಸ್ತೆ ಕಾಮಗಾರಿಯ ವಿಳಂಬ ಧೋರಣೆಯನ್ನು ಖಂಡಿಸಿ, ಇಂದು ಮುಂಜಾನೆ  ಸ್ಥಳೀಯ ಸಾರ್ವಜನಿಕರು  ಮತ್ತು ವ್ಯಾಪಾರಸ್ಥರು ರಸ್ತೆ ತಡೆ ನಡೆಸಿ  ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಂಗಾವತಿಯಲ್ಲಿ  ನಡೆದಿದೆ.

ನಗರದ  ಜುಲೈ ನಗರ ರಾಯಚೂರು ರಸ್ತೆಯಿಂದ ಗೌಳಿ ಮಹಾದೇವಪ್ಪ ರಸ್ತೆ ವರೆಗಿನ  ಕಾಮಗಾರಿಯು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿರುವುದು ಸಾರ್ವಜನಿಕರ ತಾಳ್ಮೆಯನ್ನು ಕೆರಳಿಸಿದೆ. ಇದರ ಪರಿಣಾಮವಾಗಿ ವಾಹನ ಸಂಚಾರದಿಂದ ಉಂಟಾಗುತ್ತಿರುವ ವಿಪರೀತ ಧೂಳಿನ ಸಮಸ್ಯೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಉಸಿರಾಟದ ತೊಂದರೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಕಾಮಗಾರಿಯ ಮಂದಗತಿ ಹಾಗೂ ಧೂಳಿನ ಧಾಳಿಯಿಂದ ರೋಸಿಹೋದ ಸ್ಥಳೀಯರು ಮತ್ತು ವ್ಯಾಪಾರಸ್ಥರು ಒಗ್ಗೂಡಿ, ರಸ್ತೆಯ ಮಧ್ಯೆ ಡಿವೈಡರ್ ರಾಡ್‌ಗಳನ್ನು ಅಡ್ಡಲಾಗಿ ಹಾಕಿ ದಿಢೀರ್ ರಸ್ತೆ ತಡೆ ನಡೆಸಿದರು. ಈ ದಿಢೀರ್ ಪ್ರತಿಭಟನೆಯಿಂದಾಗಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿಸ್ತಬ್ದಗೊಂಡು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.

ಸ್ಥಳದಲ್ಲಿ ಸಾರ್ವಜನಿಕರು ರಸ್ತೆ ತಡೆ ನಡೆಸಿರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಪ್ರತಿಭಟನೆಯಿಂದ ಸಾರ್ವಜನಿಕ ಸಂಚಾರಕ್ಕೆ ಉಂಟಾಗುತ್ತಿರುವ ತೊಂದರೆಯನ್ನು ಮನವರಿಕೆ ಮಾಡಿಕೊಟ್ಟ ಪೊಲೀಸರು, ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ರಾಡ್‌ಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

ಬಳಿಕ ಎಚ್ಚೆತ್ತ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದರು. ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವುದಾಗಿ ಹಾಗೂ ಧೂಳಿನ ಸಮಸ್ಯೆಯನ್ನು ತಡೆಗಟ್ಟಲು ಪ್ರತಿದಿನ ಮೂರು ಬಾರಿ (ಮೂಂಜಾನೆ, ಮಧ್ಯಾಹ್ನ ಮತ್ತು ಸಂಜೆ) ರಸ್ತೆಗೆ ನೀರು ಹಾಕಿಸುವುದಾಗಿ ಭರವಸೆ ನೀಡಿದರು. ಈ ಭರವಸೆಯ ಬಳಿಕ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಕೈಬಿಟ್ಟು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...