Home ಸುದ್ದಿ ನ್ಯಾಯಬೆಲೆ ಅಂಗಡಿ ಮಾಲೀಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಆಹಾರ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಕೆ.
ಸುದ್ದಿ

ನ್ಯಾಯಬೆಲೆ ಅಂಗಡಿ ಮಾಲೀಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಆಹಾರ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಕೆ.

Share
Share

ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ.

ಗಂಗಾವತಿ: ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರು ಎದುರಿಸುತ್ತಿರುವ ವಿವಿಧ ಗಂಭೀರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಕೃಷ್ಣಪ್ಪ ಟಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆಯ ಆಯುಕ್ತರಿಗೆ ಅಧಿಕೃತ ಮನವಿ ಸಲ್ಲಿಸಲಾಗಿದೆ. ಬೆಂಗಳೂರಿನ ಬಾಬು ಜಗಜೀವನ ರಾಮ್ ಲಿಡ್ಕರ್ ಭವನದಲ್ಲಿ ಜರುಗಿದ ರಾಜ್ಯ ಪಡಿತರ ವಿತರಕರ ಪ್ರಮುಖ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗಂಗಾವತಿ ತಾಲೂಕು ಹಾಗೂ ರಾಜ್ಯದ ನಾನಾ ಭಾಗಗಳ ಪದಾಧಿಕಾರಿಗಳು ಈ ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಪ್ರಸ್ತುತ ಸರ್ಕಾರ ಜಾರಿಗೆ ತಂದಿರುವ ಪಡಿತರ ವಿತರಣೆಯ ಸಮಯದ ಕುರಿತು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಯಿತು. ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಅಂದರೆ ಸುಮಾರು 16 ಗಂಟೆಗಳ ಕಾಲ ನಿರಂತರವಾಗಿ ಅಂಗಡಿಯನ್ನು ತೆರೆದಿಡಬೇಕಾದ ಅನಿವಾರ್ಯತೆಯಿಂದ ಮಾಲೀಕರು ಹಾಗೂ ಸಿಬ್ಬಂದಿಯ ಆರೋಗ್ಯ, ಕುಟುಂಬ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ, ಈ ಸಮಯವನ್ನು ಮರುಪರಿಶೀಲಿಸಿ ಎಲ್ಲರಿಗೂ ಅನುಕೂಲವಾಗುವಂತೆ ಕಾರ್ಯಸಾಧ್ಯವಾದ ಹೊಸ ಸಮಯವನ್ನು ನಿಗದಿಪಡಿಸಬೇಕೆಂದು ಸಂಘವು ಬಲವಾಗಿ ಒತ್ತಾಯಿಸಿದೆ.

ಇದಲ್ಲದೆ, ಪಡಿತರ ವಿತರಣಾ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆರ್ಥಿಕ ತೊಡಕುಗಳ ಬಗ್ಗೆಯೂ ಮನವಿಯಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ. ಯಶಸ್ವಿಯಾಗಿ ಪೂರ್ಣಗೊಂಡಿರುವ ಕೆ.ವೈ.ಸಿ. (KYC) ಕಾರ್ಯದ ಪ್ರೋತ್ಸಾಹಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಈ ತಿಂಗಳು ಎರಡು ಬಾರಿ ಬಯೋಮೆಟ್ರಿಕ್ ಕಡ್ಡಾಯಗೊಳಿಸಿರುವುದರಿಂದ ಸರ್ವರ್ ಮೇಲೆ ವಿಪರೀತ ಒತ್ತಡ ಬಿದ್ದು ಫಲಾನುಭವಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, ಕೂಡಲೇ ಸರ್ವರ್ ಸಾಮರ್ಥ್ಯವನ್ನು ಹೆಚ್ಚಿಸಬೇಕೆಂದು ಆಗ್ರಹಿಸಲಾಗಿದೆ.

ಬೆರಳಚ್ಚು (ಬಯೋಮೆಟ್ರಿಕ್) ದೃಢೀಕರಣ ನೀಡಲು ಅಸಾಧ್ಯವಿರುವ ವಯೋವೃದ್ಧರು ಹಾಗೂ ಅಂಗವಿಕಲ ಫಲಾನುಭವಿಗಳ ಅನುಕೂಲಕ್ಕಾಗಿ ಆಧಾರ್ ಒಟಿಪಿ (OTP) ಮೂಲಕ ಪಡಿತರ ವಿತರಿಸಲು ಶಾಶ್ವತ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ. ಸಾರ್ವಜನಿಕ ಸೇವೆ ಸಲ್ಲಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಕ್ತ ರಕ್ಷಣೆ ನೀಡುವುದರ ಜೊತೆಗೆ, ಜೀವನೋಪಾಯಕ್ಕೆ ಆಧಾರವಾಗುವಂತೆ ಪ್ರಸ್ತುತ ಕಮಿಷನ್ ಮೊತ್ತವನ್ನು ಹೆಚ್ಚಿಸಬೇಕು ಹಾಗೂ ಇತರೆ ಅನ್ಯರಾಜ್ಯಗಳ ಮಾದರಿಯಲ್ಲಿ ಏಕರೂಪದ ಕಮಿಷನ್ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಪ್ರಮುಖ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗಿದೆ.

ಈ ಸಭೆಯಲ್ಲಿ ಗಂಗಾವತಿ ತಾಲೂಕು ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷರಾದ ಕೆ. ಮಂಜುನಾಥ್, ಉಪಾಧ್ಯಕ್ಷರಾದ ಎಂ.ಪಿ. ಪಂಪನಗೌಡ, ಕೋಶಾಧ್ಯಕ್ಷರಾದ ರಾಜಶೇಖರ್ ಬೆಳಗೋಡು, ಕಾರ್ಯದರ್ಶಿ ಹೆಚ್. ವೀರಭದ್ರಪ್ಪ ಹಾಗೂ ನಿರ್ದೇಶಕರಾದ ಚೆನ್ನಯ್ಯಸ್ವಾಮಿ, ವಸಂತಗೌಡ, ವಿ.ಬಿ. ನಜೀರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಹೋಷ್ಠಿಯ ಪದಾಧಿಕಾರಿಗಳು ಮತ್ತು ನೂರಾರು ಸಿಬ್ಬಂದಿ ಉಪಸ್ಥಿತರಿದ್ದರು. ಶೀಘ್ರವೇ ಸರ್ಕಾರವು ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೆರವಾಗುವ ಆಡಳಿತಾತ್ಮಕ ಆದೇಶಗಳನ್ನು ಹೊರಡಿಸಬೇಕೆಂದು ಸಂಘವು ಮನವಿ ಮೂಲಕ ಕೋರಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...