Home ಸುದ್ದಿ ನವಲಿ ಸರ್ಕಾರಿ ಪ್ರೌಢಶಾಲೆ ಮುಖ್ಯಗುರುಗಳ ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿ ಖಂಡಿಸಿ ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ: ಅಮಾನತಿಗೆ ಆಗ್ರಹ.
ಸುದ್ದಿ

ನವಲಿ ಸರ್ಕಾರಿ ಪ್ರೌಢಶಾಲೆ ಮುಖ್ಯಗುರುಗಳ ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿ ಖಂಡಿಸಿ ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ: ಅಮಾನತಿಗೆ ಆಗ್ರಹ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಕನಕಗಿರಿ.

ಕನಕಗಿರಿ: ಗಂಗಾವತಿ ತಾಲೂಕಿನ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯಗುರುಗಳ ಕರ್ತವ್ಯಲೋಪ, ಸಮಯಕ್ಕೆ ಸರಿಯಾಗಿ ಹಾಜರಾಗದಿರುವುದು ಮತ್ತು ಮೂಲಸೌಕರ್ಯಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಎಸ್‌ಎಫ್‌ಐ ಕಾರ್ಯಕರ್ತರು ಶನಿವಾರ ಶಾಲೆಯ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ಶಾಲೆಯ ಆಡಳಿತ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಗೆ ಸರಿಯಾದ ಸಮಯಕ್ಕೆ ಬಾರದಿರುವುದು ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಗುರು ಅಜ್ಮೀರ್ ಊಮಲೂಟಿ ಅವರ ಕಾರ್ಯವೈಖರಿ ವಿರುದ್ಧ ಎಲ್ಲರೂ ಒಮ್ಮತದ ಅಸಮಾಧಾನ ಹೊರಹಾಕಿದರು. ವಿದ್ಯಾರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಸಮರ್ಪಕವಾಗಿ ಪೌಷ್ಟಿಕ ಆಹಾರ ನೀಡುತ್ತಿಲ್ಲ. ಶೌಚಾಲಯ ಹಾಗೂ ಕುಡಿಯುವ ನೀರಿನ ನಿರ್ವಹಣೆ ಸರಿಯಾಗಿಲ್ಲದೆ ಸ್ವಚ್ಛತೆಯ ಕೊರತೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಪಾಲಕರ ಸಮಸ್ಯೆಗಳಿಗೆ ಮುಖ್ಯಗುರುಗಳು ಸ್ಪಂದಿಸುತ್ತಿಲ್ಲ. ಕ್ರೀಡೆ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳಿಗೂ ಯಾವುದೇ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ಮುಖ್ಯಗುರು ಅಜ್ಮೀರ್ ಊಮಲೂಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಬಲವಾಗಿ ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ಕೃಷ್ಣ, ಗ್ರಾಮಸ್ಥರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ನಾಗಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಟೇಶ್ ಅವರು ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿ ಶಾಲೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿ, “ಮುಖ್ಯಗುರುಗಳ ಕರ್ತವ್ಯಲೋಪ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಶಿಸ್ತುಕ್ರಮ ಕೈಗೊಳ್ಳಲು ಮೇಲಧಿಕಾರಿಯಾದ ಡಿಡಿಪಿಐ ಅವರಿಗೆ ವರದಿ ಸಲ್ಲಿಸಲಾಗುವುದು” ಎಂದು ಭರವಸೆ ನೀಡಿದರು. ಬಿಇಒ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...