Home ಸುದ್ದಿ ಭಾರತ ಭಾಗ್ಯವಿಧಾತ: ಬಾಬಾ ಸಾಹೇಬ ಅಂಬೇಡ್ಕರರ ಸಾಂವಿಧಾನಿಕ ಮಾರ್ಗದಲ್ಲಿ ಸ್ವತಂತ್ರ ಭಾರತವನ್ನು ಮುನ್ನಡೆಸೋಣ: ಡಾ. ಕರಿಗೂಳಿ.
ಸುದ್ದಿ

ಭಾರತ ಭಾಗ್ಯವಿಧಾತ: ಬಾಬಾ ಸಾಹೇಬ ಅಂಬೇಡ್ಕರರ ಸಾಂವಿಧಾನಿಕ ಮಾರ್ಗದಲ್ಲಿ ಸ್ವತಂತ್ರ ಭಾರತವನ್ನು ಮುನ್ನಡೆಸೋಣ: ಡಾ. ಕರಿಗೂಳಿ.

Share
Share
ಮರ್ಚೆಡ್ ಡೇಸ್ ಸುದ್ದಿ|ಶ್ರೀರಾಮನಗರ.

ಗಂಗಾವತಿ : ತಾಲ್ಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ  ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಸಾಮೂಹಿಕವಾಗಿ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು. ನಂತರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಗೂಳಿಯವರು, ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಜೀವವನ್ನೇ ಅರ್ಪಿಸಿದ ಮಹನೀಯರ ತ್ಯಾಗ-ಬಲಿದಾನಗಳು ಹಾಗೂ ದೇಶಕ್ಕಾಗಿ ಹುತಾತ್ಮರಾದ ಅಸಂಖ್ಯಾತ ವೀರ ಸೇನಾನಿಗಳ ಸಾಹಸಗಾಥೆಯನ್ನು ಸ್ಮರಿಸಿದರು. ಇವರ ತ್ಯಾಗವು ದೇಶಪ್ರೇಮಿಗಳಿಗೆ ಎಂದೆಂದಿಗೂ ಆದರ್ಶಪ್ರಾಯ ಎಂದು ತಿಳಿಸಿದರು.

ಮಾರ್ಮಿಕವಾಗಿ ಮಾತನಾಡಿದ ಅವರು, ಭವ್ಯ ಭಾರತದ ಪ್ರಥಮ ಪ್ರಜೆಗಳಾದ ಮಾನ್ಯ ರಾಷ್ಟ್ರಪತಿಗಳು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಸಂದೇಶದಲ್ಲಿ ಪ್ರಸ್ತಾಪಿಸಿದಂತೆ, “ವಿದ್ಯಾರ್ಥಿಗಳೇ ನವಭಾರತದ ಭವಿಷ್ಯದ ನಿರ್ಮಾತೃಗಳು” ಎಂಬ ಮಾತನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಜವಾಬ್ದಾರಿಯುತವಾಗಿ ಸ್ವೀಕರಿಸಬೇಕು ಎಂದು ಕಿವಿಮಾತು ಹೇಳಿದರು. ಅಲ್ಲದೆ, ಸ್ವತಂತ್ರ ಭಾರತವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಾಂವಿಧಾನಿಕ ಮಾರ್ಗದಲ್ಲಿ ಮುನ್ನಡೆಸಲು ಎಲ್ಲರೂ ಸನ್ನದ್ಧರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಈ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರಾದ ವೀರೇಶ್, ಡಾ. ವಿರೂಪಾಕ್ಷ. ಕೆ,ರವಿಕುಮಾರ, ಡಾ. ಶಶಿಕುಮಾರ, ಅತಿಥಿ

ಉಪನ್ಯಾಸಕರಾದ ದೇವರಾಜ್, ಈಶಪ್ಪ ಹಾಗೂ ಆಡಳಿತ ಸಿಬ್ಬಂದಿಯಾದ ಜಬೀನಾ ಬೇಗಂ, ವಿನಾಯಕ ಸೇರಿದಂತೆ ಸಹಾಯಕ ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...