Home ಸುದ್ದಿ ಹಿರೇ ಜಂತಕಲ್ ವಿನಾಯಕ ಕನ್ನಡ ಶಾಲೆಯಲ್ಲಿ ಅರ್ಥಪೂರ್ಣ 80ನೇ ಸ್ವಾತಂತ್ರ್ಯೋತ್ಸವ ಆಚರಣೆ.
ಸುದ್ದಿ

ಹಿರೇ ಜಂತಕಲ್ ವಿನಾಯಕ ಕನ್ನಡ ಶಾಲೆಯಲ್ಲಿ ಅರ್ಥಪೂರ್ಣ 80ನೇ ಸ್ವಾತಂತ್ರ್ಯೋತ್ಸವ ಆಚರಣೆ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ: ಸ್ಥಳೀಯ ವಿನಾಯಕ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಮಹಾನ್ ನಾಯಕರಿಗೆ ಗೌರವ ನಮನಗಳನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಈ ವಿಶೇಷ ಸಂಭ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶಾವಿ ತಿಪ್ಪಣ್ಣ, ಕಾರ್ಯದರ್ಶಿ ಕೆ. ವೀರೇಶ್, ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ನಾಯ್ಡು, ದೈಹಿಕ ಶಿಕ್ಷಕರಾದ ಉಜ್ಜನಗೌಡ ಉಪಸ್ಥಿತರಿದ್ದರು. ಜೊತೆಗೆ ಶಿಕ್ಷಕರಾದ ರಾಮನಗೌಡ, ಚನ್ನಬಸವ, ಸಂತೋಷ್ ಹಾಗೂ ಶಿಕ್ಷಕಿಯರಾದ ಕುಮಾರಿ ಯಶೋಧ, ಕುಮಾರಿ ದೇವಿಕಾ, ಕುಮಾರಿ ಗೀತಾ, ಶ್ರೀಮತಿ ಭಾಗ್ಯಶ್ರೀ ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಲಕರಾದ ಬಸವರಾಜ್ ಹಾಗೂ ಶಾಲಾ ಸುಧಾರಣಾ ಸಮಿತಿ ಸದಸ್ಯರಾದ ಯಾಸಿನ್ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು. ಎಲ್ಲರೂ ಒಟ್ಟಾಗಿ ಸೇರಿ ಮಕ್ಕಳಲ್ಲಿ ದೇಶಪ್ರೇಮವನ್ನು ಮೂಡಿಸುವ ಮೂಲಕ ಹಬ್ಬದ ವಾತಾವರಣದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಿದರು.

ಕಾರ್ಯಕ್ರಮದ ಕುರಿತು ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ನಾಯ್ಡು, ಮಹಾನ್ ನಾಯಕರ ತ್ಯಾಗ-ಬಲಿದಾನಗಳಿಂದ ಇಂದು ನಾವು ಮುಕ್ತವಾಗಿ ಬದುಕುತ್ತಿದ್ದೇವೆ ಎಂದರು. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳಾಗಿದ್ದು, ಅವರು ತಮ್ಮ ಜವಾಬ್ದಾರಿಯನ್ನು ಸುಸ್ಥಿರವಾಗಿ ನಿರ್ವಹಿಸಿದರೆ ನಮ್ಮ ಈ ದೇಶವು ಜಗತ್ತಿನ ಸೂಪರ್ ಪವರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶುಭ ಹಾರೈಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...