Home ಸುದ್ದಿ ದ್ವಿಚಕ್ರ ವಾಹನ ಡಿಕ್ಕಿ ಅಪಘಾತ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮರಳುತ್ತಿದ್ದ ಯುವತಿ ದುರ್ಮರಣ, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯ.
ಸುದ್ದಿ

ದ್ವಿಚಕ್ರ ವಾಹನ ಡಿಕ್ಕಿ ಅಪಘಾತ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮರಳುತ್ತಿದ್ದ ಯುವತಿ ದುರ್ಮರಣ, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಹುಲಿಗಿ.

ಕೊಪ್ಪಳ: ಪ್ರಸಿದ್ಧ ಹುಲಿಗೆಮ್ಮ ದೇವಿ ದರ್ಶನ ಪಡೆದು ಕುಂಟೋಜಿ ಗ್ರಾಮಕ್ಕೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಜರುಗಿದೆ.

ಕಾರಟಗಿ ತಾಲೂಕಿನ ಕುಂಟೋಜಿ ಗ್ರಾಮದ ನಿವಾಸಿ ಶಿಲ್ಪಾ (24) ಸ್ಥಳದಲ್ಲೇ ಪ್ರಾಣ ಬಿಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅವರ ಕುಟುಂಬದವರು ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಬಂಡಿ ಹರ್ಲಾಪುರ ಗ್ರಾಮದ ಸಮೀಪ ಬರುತ್ತಿದ್ದಂತೆ, ಹಿಂಬದಿಯಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಮತ್ತೊಂದು ಬೈಕ್ ಸವಾರ ಇವರ ವಾಹನಕ್ಕೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸ್ತೆ ಬೈಕ್‌ನಲ್ಲಿದ್ದ ಸವಾರರು ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ಅತಿ ಹೆಚ್ಚು ರಕ್ತಸ್ರಾವವಾದ ಕಾರಣ ಶಿಲ್ಪಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಕಂದಮ್ಮ, ಮತ್ತೊಬ್ಬ ಮಹಿಳೆ ಹಾಗೂ ಡಿಕ್ಕಿ ಹೊಡೆದ ಬೈಕ್ ಸವಾರನಿಗೂ ಸಹ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಥಳೀಯ ಸಾರ್ವಜನಿಕರು ತಕ್ಷಣವೇ ಸ್ಪಂದಿಸಿ, ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ತುರ್ತು ಚಿಕಿತ್ಸೆ ಮುಂದುವರಿದಿದೆ.

ದಾರುಣ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮುನಿರಾಬಾದ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಮುಂದುವರಿದಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...