Home ಸುದ್ದಿ ದೃಶ್ಯಕಲಾ ಕ್ಷೇತ್ರದಲ್ಲಿಯೂ ಕಲಾಕೃತಿಗಳ ವಿಮರ್ಶೆ ಅತ್ಯಗತ್ಯ: ಡಾ. ಅಶೋಕ ಶೆಟಕಾರ್ ಅಭಿಪ್ರಾಯ.
ಸುದ್ದಿ

ದೃಶ್ಯಕಲಾ ಕ್ಷೇತ್ರದಲ್ಲಿಯೂ ಕಲಾಕೃತಿಗಳ ವಿಮರ್ಶೆ ಅತ್ಯಗತ್ಯ: ಡಾ. ಅಶೋಕ ಶೆಟಕಾರ್ ಅಭಿಪ್ರಾಯ.

Share
Share

 

 

ಮರ್ಚೆಡ್ ಡೇಸ್ ಸುದ್ದಿ|ಕಲಾಬುರಗಿ.

ಕಲಬುರಗಿ: ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರಗಳಂತೆ ದೃಶ್ಯಕಲಾ ಕ್ಷೇತ್ರದಲ್ಲಿಯೂ ಕಲಾಕೃತಿಗಳ ವಸ್ತುನಿಷ್ಠ ವಿಮರ್ಶೆ ನಡೆಯಬೇಕು. ಆಗ ಮಾತ್ರ ಕಲಾವಿದರು ತಮ್ಮ ಕೃತಿಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಉತ್ತಮ ಕಲಾಕೃತಿಗಳನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಚಿತ್ರಕಲಾವಿದ ಡಾ. ಅಶೋಕ ಶೆಟಕಾರ್ ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿಯ ವಿಜಯನಗರ ಕಾಲೋನಿಯ ಅನುಚಂದ್ರ ಆರ್ಟ್ ಸ್ಟುಡಿಯೋದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಯಾದಗಿರಿ ಯುವ ಕಲಾವಿದ ಅಮೀನರೆಡ್ಡಿ ಅವರ “ಬ್ಲಾಕ್ ಪ್ಲಾವರ-4” ಶೀರ್ಷಿಕೆಯ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.

ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಡಾ. ಬಸವರಾಜ ಕಲೆಗಾರ ಮಾತನಾಡಿ, ಅಮೀನರೆಡ್ಡಿ ಅವರು ಜೀವಪರ ಕಾಳಜಿ ಹಾಗೂ ಪರಿಸರ ಪ್ರೀತಿಯುಳ್ಳ ಕಲಾವಿದರಾಗಿದ್ದು, ಆಧುನಿಕತೆಯ ಭರಾಟೆಯಲ್ಲಿ ಮಾನವನು ಪ್ರಕೃತಿಯನ್ನು ನಾಶ ಮಾಡಿ ಕಾಂಕ್ರೀಟ್ ಕಾಡುಗಳಲ್ಲಿ ಬದುಕುತ್ತಿರುವ ದುಸ್ಥಿತಿಯನ್ನು ತಮ್ಮ ವರ್ಣಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸಿದ್ದಾರೆ ಎಂದರು.

ಕಲಬುರಗಿ ನಗರದಲ್ಲಿ 10ಕ್ಕೂ ಹೆಚ್ಚು ಗ್ಯಾಲರಿಗಳಿದ್ದರೂ ಯಾದಗಿರಿಯಲ್ಲಿ ಕಲಾ ಪ್ರದರ್ಶನಕ್ಕೆ ಸೂಕ್ತ ಗ್ಯಾಲರಿಗಳಿಲ್ಲ. ಹೀಗಾಗಿ ಯಾದಗಿರಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರವು ಕೂಡಲೇ ಯಾದಗಿರಿ ನಗರದಲ್ಲಿ ಸುಸಜ್ಜಿತವಾದ ಚಿತ್ರಕಲಾ ಗ್ಯಾಲರಿಯನ್ನು ನಿರ್ಮಿಸಿ ಯುವ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕೆಂದು ಡಾ. ಬಸವರಾಜ ಕಲೆಗಾರ ಆಗ್ರಹಿಸಿದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ಶಿಲ್ಪಕಲಾವಿದ ಚಂದ್ರಶೇಖರ ವ್ಹಾಯ್ ಅವರಿಗೆ ಸಭೆಯಲ್ಲಿ ನುಡಿನಮನ ಸಲ್ಲಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯರು, ಕಲಾ ಪ್ರೇಮಿಗಳು ಹಾಗೂ ಚಿತ್ರಕಲಾ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...