Home ಸುದ್ದಿ ಕಲಬುರಗಿಯಲ್ಲಿ ಆ. 18 ರಿಂದ ಯುವ ಕಲಾವಿದ ತಿಪ್ಪಣ್ಣ ಜಾಧವ ಅವರ ಚಿತ್ರಕಲಾ ಪ್ರದರ್ಶನ.
ಸುದ್ದಿ

ಕಲಬುರಗಿಯಲ್ಲಿ ಆ. 18 ರಿಂದ ಯುವ ಕಲಾವಿದ ತಿಪ್ಪಣ್ಣ ಜಾಧವ ಅವರ ಚಿತ್ರಕಲಾ ಪ್ರದರ್ಶನ.

Share
Share

ಮರ್ಚೆಡ್ ಡೇಸ್ ಸುದ್ದಿ|ಕಲಬುರಗಿ.

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಪ್ರತಿಭಾವಂತ ಯುವ ಚಿತ್ರಕಲಾವಿದ ತಿಪ್ಪಣ್ಣ ಜಾಧವ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ನಗರದ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ. ಈ ಕಲಾ ಪ್ರದರ್ಶನವು ಆಗಸ್ಟ್ 18 ರಿಂದ ಆಗಸ್ಟ್ 20, 2026 ರವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ನಡೆಯಲಿದೆ.

ಈ ಚಿತ್ರಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭವು ಆಗಸ್ಟ್ 18, 2026 ರಂದು ಸಾಯಂಕಾಲ 5:00 ಗಂಟೆಗೆ ನೆರವೇರಲಿದೆ. ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶಾಂತಮಲ್ಲ ಶಿವಬೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ.

ಸಮಾರಂಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೃಶ್ಯಕಲಾ ಅಧ್ಯಯನ ವಿಭಾಗದ ಅಧ್ಯಾಪಕರಾದ ಡಾ. ಪರಶುರಾಮ ಪಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವ್ಹಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಬಿರಾದಾರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರುವ ತಿಪ್ಪಣ್ಣ ಜಾಧವ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ, ಬೆಂಗಳೂರು ಹಾಗೂ ಕಲಬುರಗಿಯ ಚಿತ್ರಸಂತೆ ಮತ್ತು ಬೆಳಗಾವಿಯ ಸಮೂಹ ಚಿತ್ರಕಲಾ ಪ್ರದರ್ಶನಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ. ಜೊತೆಗೆ 5ಕ್ಕೂ ಹೆಚ್ಚು ಚಿತ್ರಕಲಾ ಶಿಬಿರಗಳಲ್ಲಿ ಪಾಲ್ಗೊಂಡು ಕಲಾ ನೈಪುಣ್ಯ ಮೆರೆದಿರುವ ಇವರು, ವಿವಿಧ ಮಾಧ್ಯಮಗಳಲ್ಲಿ ರಚಿಸಿರುವ ಸುಮಾರು 15ಕ್ಕೂ ಹೆಚ್ಚು ಆಕರ್ಷಕ ವರ್ಣಚಿತ್ರಗಳು ಈ ಪ್ರದರ್ಶನದಲ್ಲಿ ಅನಾವರಣಗೊಳ್ಳಲಿವೆ.

ಆಗಸ್ಟ್ 18 ರಿಂದ 20 ರವರೆಗೆ ಪ್ರತಿದಿನ ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ಕಲಾ ಪ್ರದರ್ಶನ ತೆರೆದಿರಲಿದ್ದು, ಕಲಾಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾಕೃತಿಗಳನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...