Home ಸುದ್ದಿ ಕನಕಗಿರಿ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ.
ಸುದ್ದಿ

ಕನಕಗಿರಿ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Share
Share
ಮರ್ಚೆಡ್ ಡೇಸ್ ಸುದ್ದಿ. ಕನಕಗಿರಿ.

ಕನಕಗಿರಿ: ತಾಲೂಕಿನಲ್ಲಿ ನಡೆದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ನಾಲ್ವರು ಆರೋಪಿಗಳನ್ನು ಮಂಗಳವಾರ ಗಂಗಾವತಿಯ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸುದೀರ್ಘ ಪರಿಶೀಲನೆ ನಡೆಸಿದ ನ್ಯಾಯಾಧೀಶ ಮಂಜುನಾಥ್ ಶಿವಲಿಂಗಪ್ಪ ಅವರು, ಆರೋಪಿಗಳನ್ನು ಮುಂದಿನ ಆದೇಶದವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ ಶೀಘ್ರವೇ ದೋಷಾರೋಪಣೆ ಪಟ್ಟಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಬಂಧಿತ ಆರೋಪಿಗಳೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರನ್ನು ಕನಕಗಿರಿ ಪಟ್ಟಣದ 5ನೇ ವಾರ್ಡ್ ಮೆಹಬೂಬ್ ನಗರದ ನಿವಾಸಿಗಳಾದ ಮೆಹಬೂಬ್ ಅಲಿಸಾಬ್ ಹೊನ್ನರಸಾಬ್ ಬಿಳಿಕುದರಿ, ಎಲೆಕ್ಟ್ರಿಷಿಯನ್ ಹುಸೇನ್‌ಭಾಷಾ ಮೆಹಬೂಬ್ ಅಲಿಸಾಬ್, ದಾದಾಪೀರ್ ಮೆಹಬೂಬ್‌ಅಲಿ ಹಾಗೂ ಶಾಬುದ್ದಿನ್ ಬುಡೇನ್ ಸಾಬ್ ಬಿಳಿಕುದರಿ ಎಂದು ಗುರುತಿಸಲಾಗಿದೆ. ನ್ಯಾಯಾಲಯದ ಆದೇಶದ ಬಳಿಕ ಪೊಲೀಸರು ಆರೋಪಿಗಳನ್ನು ಗಂಗಾವತಿ ನ್ಯಾಯಾಲಯದ ಆವರಣದಿಂದ ಕರೆದುಕೊಂಡು ಹೋದರು.

ಈ ಪ್ರಕರಣವು ಕನಕಗಿರಿ ಪಟ್ಟಣದ ಸರ್ವೇ ನಂಬರ್ 50 ರ ಜಮೀನಿನಲ್ಲಿರುವ ನಿವೇಶನಕ್ಕೆ ಸಂಬಂಧಿಸಿದೆ. ಮೃತ ಯುವಕ ಬಸವರಾಜ ರೆಡ್ಡಿ ಕೃಷ್ಣಾರೆಡ್ಡಿ ಮಾದಿನಾಳ ಎಂಬಾತ ತನಗೆ ಸೇರಿದ 30*100 ಅಳತೆಯ ಸ್ವಂತ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿದ್ದನು. ಆ ಸಂದರ್ಭದಲ್ಲಿ ಈ ನಾಲ್ವರು ಆರೋಪಿಗಳು ಅನಗತ್ಯವಾಗಿ ತಕರಾರು ತೆಗೆದು, ಆತನಿಗೆ ತೀವ್ರ ರೀತಿಯ ಕಿರುಕುಳ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳ ನಿರಂತರ ತೊಂದರೆಯಿಂದ ಬೇಸತ್ತ ಯುವಕ ಬಸವರಾಜ ರೆಡ್ಡಿ, ನ್ಯಾಯಕ್ಕಾಗಿ ಕನಕಗಿರಿ ಪೊಲೀಸ್ ಠಾಣೆ ಹಾಗೂ ಪುರಸಭೆಗೆ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದನು. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಸಕಾಲಕ್ಕೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎನ್ನಲಾಗಿದೆ. ಜೊತೆಗೆ ಪೊಲೀಸರು ಆತನ ದೂರನ್ನು ಸ್ವೀಕರಿಸಲು ನಿರಾಕರಿಸಿದ್ದರು ಎಂಬ ಗುರುತರ ಆರೋಪವೂ ಕೇಳಿಬಂದಿದೆ.

ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಆರೋಪಿಗಳ ಕಿರುಕುಳದಿಂದ ತೀವ್ರ ಮನನೊಂದ ಯುವಕ ಬಸವರಾಜ ರೆಡ್ಡಿ ಅಂತಿಮವಾಗಿ ಆತ್ಮಹತ್ಯೆಗೆ ಶರಣಾಗಿದ್ದನು. ಪೊಲೀಸರ ಕರ್ತವ್ಯ ಲೋಪ ಹಾಗೂ ವೈಫಲ್ಯವೇ ಈ ಯುವಕನ ಸಾವಿಗೆ ನೇರ ಕಾರಣ ಎಂದು ಆಕ್ರೋಶಗೊಂಡ ನೂರಾರು ಜನರು ಮತ್ತು ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಜನರ ತೀವ್ರ ಪ್ರತಿಭಟನೆ ಹಾಗೂ ಸಾರ್ವಜನಿಕರ ಒತ್ತಡಕ್ಕೆ ಎಚ್ಚೆತ್ತ ಪೊಲೀಸರು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೃತನ ಪತ್ನಿ ರಾಧಿಕಾ ಬಸವರಾಜ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡರು. ತನಿಖೆ ಕೈಗೆತ್ತಿಕೊಂಡ ಕನಕಗಿರಿ ಪೊಲೀಸರು ಘಟನೆಗೆ ಕಾರಣರಾದ ನಾಲ್ವರನ್ನೂ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...