Home ಸುದ್ದಿ ಆ. 24ರಂದು ಗಾಂಧಿ ಭವನದಲ್ಲಿ ವಿ.ಪಿ. ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರದಾನ: ‘ತೊಡರು ಬಳ್ಳಿ’ ಕೃತಿ ಜನಾರ್ಪಣೆ.
ಸುದ್ದಿ

ಆ. 24ರಂದು ಗಾಂಧಿ ಭವನದಲ್ಲಿ ವಿ.ಪಿ. ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರದಾನ: ‘ತೊಡರು ಬಳ್ಳಿ’ ಕೃತಿ ಜನಾರ್ಪಣೆ.

Share
Share

 

ಮರ್ಚೇಡ್ ಡೇಸ್ ಸುದ್ದಿ.

ಬೆಂಗಳೂರು: ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ವಿ. ನಾಗರಾಜು ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಸಾಧಕರಿಗೆ ‘ವಿ.ಪಿ. ಸಿಂಗ್’ ಮತ್ತು ‘ಕರ್ಪೂರಿ ಠಾಕೂರ್’ ಪ್ರಶಸ್ತಿ ಪ್ರದಾನ ಹಾಗೂ ‘ತೊಡರು ಬಳ್ಳಿ’ ಕೃತಿ ಜನಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ‘ತೊಡರು ಬಳ್ಳಿ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಂಘದ ಗುರುತಿನ ಚೀಟಿ ವಿತರಿಸಲಿದ್ದು, ಹಿರಿಯ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹಾಗೂ ತಮಿಳುನಾಡು ಸಂಸದ ತೋಲ್. ತಿರುಮಾವಳವನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಂಘದ ಅಧ್ಯಕ್ಷ ಗಂಧರ್ವ ಸೇನಾ ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಿ ಹೆಚ್.ಜಿ. ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ವಿ. ನಾಗರಾಜು ಪ್ರತಿಷ್ಠಾನದ ಅಧ್ಯಕ್ಷೆ ಪದ್ಮಾ ನಾಗರಾಜು, ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಮಾಹಿತಿ ಹಕ್ಕು ಆಯೋಗದ ಆಯುಕ್ತ ಬಿ. ವೆಂಕಟಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಗಂಗಣ್ಣ ಮುದಗಲ್, ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಹೆಚ್.ಬಿ. ದಿನೇಶ್ ಹಾಗೂ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಳನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ

ವಿ.ಪಿ. ಸಿಂಗ್ ಪ್ರಶಸ್ತಿ:

* ಡಾ. ದಿನೇಶ್ ಬಿ. – ನಿರ್ದೇಶಕರು, ಜಯದೇವ ಹೃದ್ರೋಗ ಆಸ್ಪತ್ರೆ

* ಡಾ. ನಾಗೇಶ್ ಬಸವರಾಜ – ಹೃದ್ರೋಗ ತಜ್ಞರು, ಸ್ಪರ್ಶ್ ಆಸ್ಪತ್ರೆ

* ಡಾ. ಎಸ್. ರಾಮಪ್ಪ – ಧರ್ಮದರ್ಶಿಗಳು, ಸಿಗಂಧೂರು ಶ್ರೀಚೌಡೇಶ್ವರಿ ದೇವಸ್ಥಾನ

* ಡಾ. ರಾಜು ಕಂಬಾರ್ – ಹಿರಿಯ ಪತ್ರಕರ್ತರು

* ರಾ. ಲಕ್ಷ್ಮೀನಾರಾಯಣ (ಚಿನ್ನಿ) – ಸಮಾಜ ಸೇವಕರು

* ಕೆ.ಎಸ್. ಸೋಮಶೇಖರ್ (ಸೋಮಣ್ಣ) – ಸಮಾಜ ಸೇವಕರು

ಕರ್ಪೂರಿ ಠಾಕೂರ್ ಪ್ರಶಸ್ತಿ:

* ಎಚ್. ಕಾಂತರಾಜ – ಮಾಜಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ

* ಪ್ರೊ. ಡಾ. ಬಿ.ಕೆ. ರವಿ – ಕುಲಪತಿಗಳು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ

* ಎಂ. ಸಿದ್ದರಾಜು – ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ

* ಕೆ.ವಿ. ಪ್ರಭಾಕರ್ – ಮಾಧ್ಯಮ ಸಲಹೆಗಾರರು

* ಲಕ್ಷ್ಮಣ್ ಕೊಡಸೆ – ಹಿರಿಯ ಪತ್ರಕರ್ತರು

* ಗಂಗಾಧರ್ ಮೊದಲಿಯಾರ್ – ಹಿರಿಯ ಪತ್ರಕರ್ತರು

* ಐ.ಎಚ್. ಸಂಗಮದೇವ – ಹಿರಿಯ ಪತ್ರಕರ್ತರು

* ರವಿ ಬಿದನೂರು (ರವೀಂದ್ರ ಬಿ.) – ಹಿರಿಯ ಪತ್ರಕರ್ತರು

* ಮಿನಿತೇಜಸ್ವಿ – ಪತ್ರಕರ್ತರು

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...