Home ಸುದ್ದಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವಿರುದ್ಧ ಮೌಲಾನಾ ಆಜಾದ್ ಶಾಲೆ ವಿದ್ಯಾರ್ಥಿಗಳು, ಪಾಲಕನ ಆಕ್ರೋಶ: ಮಳೆಯಲ್ಲೇ ಪ್ರತಿಭಟನೆ, ತೀವ್ರ ಹೋರಾಟದ ಎಚ್ಚರಿಕೆ.
ಸುದ್ದಿ

ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವಿರುದ್ಧ ಮೌಲಾನಾ ಆಜಾದ್ ಶಾಲೆ ವಿದ್ಯಾರ್ಥಿಗಳು, ಪಾಲಕನ ಆಕ್ರೋಶ: ಮಳೆಯಲ್ಲೇ ಪ್ರತಿಭಟನೆ, ತೀವ್ರ ಹೋರಾಟದ ಎಚ್ಚರಿಕೆ.

Share
Share
ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ : ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಮುಂದಾದ ವಿದ್ಯಾರ್ಥಿಗಳನ್ನು ಕಡೆಗಣಿಸಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರ ಧೋರಣೆಯನ್ನು ಖಂಡಿಸಿ, ಪ್ರವಾಸಿ ಮಂದಿರದ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಮಳೆಯನ್ನೂ ಲೆಕ್ಕಿಸದೆ ತೀವ್ರ ಪ್ರತಿಭಟನೆ ನಡೆಸಿದರು.

ಮನವಿ ಸ್ವೀಕರಿಸಲು ಬಾರದ ಶಾಸಕರು: ಶಾಲೆಯ ಸುಮಾರು 300 ವಿದ್ಯಾರ್ಥಿಗಳು ಹಾಗೂ 200ಕ್ಕೂ ಹೆಚ್ಚು ಪಾಲಕರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲು ಪ್ರವಾಸಿ ಮಂದಿರದ ಬಳಿ ಕಾಯುತ್ತಿದ್ದರೂ, ಶಾಸಕರು ಮನವಿ ಸ್ವೀಕರಿಸಲು ಸ್ಥಳಕ್ಕೆ ಬಾರದಿರುವುದು ಪಾಲಕರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರು ಧಾರಾಕಾರ ಮಳೆಯ ನಡುವೆಯೂ ಸ್ಥಳದಲ್ಲೇ ನಿಂತು ಪ್ರತಿಭಟನೆ ಮುಂದುವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಲಕರು, “ಇದು ಕೇವಲ ಸಾಂಕೇತಿಕ ಧರಣಿ ಹಾಗೂ ಎಚ್ಚರಿಕೆಯ ಗಂಟೆ ಮಾತ್ರ. ಶಾಸಕರು ಇನ್ನಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸದಿದ್ದರೆ, ಅಶೋಕ್ ವೃತ್ತದಲ್ಲಿ ಹಾಗೂ ಶಾಸಕರ ಮನೆಯ ಎದುರು ನೇರವಾಗಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ಖಡಕ್ ಎಚ್ಚರಿಕೆ ನೀಡಿದರು.

ಜನಪ್ರತಿನಿಧಿಗಳು ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಸ್ಪಂದಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...