Home ಸುದ್ದಿ ಹಂಪಿ ಪ್ರವಾಸದಲ್ಲಿ ಭೀಕರ ದುರಂತ: ಮಗಳನ್ನು ಉಳಿಸಲು ಹೋಗಿ ನದಿ ಸೆಳೆವಿಗೆ ಸಿಲುಕಿ ಕೊಚ್ಚಿಕೊಂಡು ಹೋದ ತಾಯಿ.
ಸುದ್ದಿ

ಹಂಪಿ ಪ್ರವಾಸದಲ್ಲಿ ಭೀಕರ ದುರಂತ: ಮಗಳನ್ನು ಉಳಿಸಲು ಹೋಗಿ ನದಿ ಸೆಳೆವಿಗೆ ಸಿಲುಕಿ ಕೊಚ್ಚಿಕೊಂಡು ಹೋದ ತಾಯಿ.

Share
Share
ಮರ್ಚೆಡ್ ಡೇಸ್ ಸುದ್ದಿ|ವಿಜಯನಗರ.

ಹಂಪಿ: ಐತಿಹಾಸಿಕ ತಾಣ ಹಂಪಿಯ ತುಂಗಭದ್ರಾ ನದಿಯ ಸ್ನಾನ ಘಟ್ಟದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ನದಿಯ ನೀರಿನ ಸುಳಿಗೆ ಸಿಲುಕಿ ಆಂಧ್ರಪ್ರದೇಶ ಮೂಲದ ತಾಯಿ ಹಾಗೂ ಅಪ್ರಾಪ್ತ ಮಗಳು ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಮೂಲದ ಶಾಹೀನ್ (38) ಹಾಗೂ ಅವರ ಮಗಳು ಯಾಸ್ಮೀನ್ (13) ನೀರಿನ ರಭಸಕ್ಕೆ ಸಿಲುಕಿ ನಾಪತ್ತೆಯಾದ ದುರ್ದೈವಿಗಳು.

ಕರ್ನೂಲ್ ಜಿಲ್ಲೆಯಿಂದ ಕುಟುಂಬ ಸಮೇತರಾಗಿ ಹಂಪಿ ಪ್ರವಾಸಕ್ಕೆಂದು ಆಗಮಿಸಿದ್ದ ಇವರು, ಇಂದು ಬೆಳಿಗ್ಗೆ ತುಂಗಭದ್ರಾ ನದಿಯ ಸ್ನಾನ ಘಟ್ಟದ ಬಳಿ ಸ್ನಾನ ಮಾಡಲು ನೀರಿಗೆ ಇಳಿದಿದ್ದಾರೆ. ಈ ವೇಳೆ ನದಿಯ ಆಳ ಮತ್ತು ನೀರಿನ ರಭಸ ಅರಿಯದ ಮಗಳು ಯಾಸ್ಮೀನ್ ಆಕಸ್ಮಿಕವಾಗಿ ನೀರಿನ ಸುಳಿಗೆ ಸಿಲುಕಿ ತೇಲಿಹೋಗಿದ್ದಾಳೆ. ಕಣ್ಣೆದುರೇ ಮಗಳು ಮುಳುಗುತ್ತಿರುವುದನ್ನು ಕಂಡು ತಲ್ಲಣಗೊಂಡ ತಾಯಿ ಶಾಹೀನ್, ಮಗಳನ್ನು ರಕ್ಷಿಸಲು ಧಾವಿಸಿದ್ದಾರೆ. ಆದರೆ ನೀರಿನ ತೀವ್ರ ಸೆಳೆತಕ್ಕೆ ತಾಯಿಯೂ ಸಿಲುಕಿ ಇಬ್ಬರೂ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ದಡದಲ್ಲಿದ್ದ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಹಂಪಿ ಪ್ರವಾಸಿ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತುಂಗಭದ್ರಾ ನದಿಯಲ್ಲಿ ಬೋಟ್ ಹಾಗೂ ಈಜುಗಾರರ ನೆರವಿನಿಂದ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

ಹಂಪಿ ಪ್ರವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರವಾಸದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈ ದುರಂತದಿಂದಾಗಿ ಆಕ್ರಂದನ ಮುಗಿಲುಮುಟ್ಟಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...