Home ಸುದ್ದಿ ಹೆದರಬೇಡಿ, ಅನಾಮಧೇಯವಾಗಿ ಮಾಹಿತಿ ನೀಡಿ: ಡ್ರಗ್ಸ್ ಮಾಫಿಯಾಗೆ ಅಂತ್ಯ ಹಾಡಲು ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಕರೆ.
ಸುದ್ದಿ

ಹೆದರಬೇಡಿ, ಅನಾಮಧೇಯವಾಗಿ ಮಾಹಿತಿ ನೀಡಿ: ಡ್ರಗ್ಸ್ ಮಾಫಿಯಾಗೆ ಅಂತ್ಯ ಹಾಡಲು ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಕರೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಸಮಾಜದ ಶಾಂತಿ ಕದಡಿ, ಯುವ ಪೀಳಿಗೆಯ ಉಜ್ವಲ ಭವಿಷ್ಯವನ್ನು ಕತ್ತಲಿಗೆ ತಳ್ಳುತ್ತಿರುವ ಮಾದಕ ದ್ರವ್ಯಗಳ (ಡ್ರಗ್ಸ್) ವಿರುದ್ಧ ಪೊಲೀಸ್ ಇಲಾಖೆ ಕಠಿಣ ಸಮರ ಸಾರಿದೆ. ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಎಲ್ಲೇ ಡ್ರಗ್ಸ್ ಮಾರಾಟ, ಸಾಗಾಟ ಅಥವಾ ಬಳಕೆಯ ಸುಳಿವು ಸಿಕ್ಕರೂ, ಸಾರ್ವಜನಿಕರು ಯಾವುದೇ ಭಯವಿಲ್ಲದೆ ನೇರವಾಗಿ ಪೊಲೀಸರಿಗೆ ಅನಾಮಧೇಯವಾಗಿ ಮಾಹಿತಿ ನೀಡುವ ಮೂಲಕ ಈ ಮಾರಕ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಸಹಕರಿಸಬೇಕು ಎಂದು ಗಂಗಾವತಿ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಡ್ರಗ್ಸ್ ವ್ಯಸನವು ಕೇವಲ ವ್ಯಕ್ತಿಯ ಬದುಕನ್ನಷ್ಟೇ ಅಲ್ಲದೆ, ಇಡೀ ಕುಟುಂಬದ ನೆಮ್ಮದಿಯನ್ನು ಸುಟ್ಟುಹಾಕುವ ಅಪಾಯಕಾರಿ ಪಿಡುಗಾಗಿದೆ. ಭವಿಷ್ಯದ ಆಶಾಕಿರಣಗಳಾದ ಯುವಕರು ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಪೋಷಕರು, ಶಿಕ್ಷಕರು ಹಾಗೂ ನಾಗರಿಕರು ಸದಾ ಎಚ್ಚರದಿಂದ ಇರಬೇಕು. ಯುವಜನರ ಒಡನಾಟ ಹಾಗೂ ದೈನಂದಿನ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ಇಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿದ ಯಾವುದೇ ಅನುಮಾನಾಸ್ಪದ ಚಲನವಲನಗಳು ಗಮನಕ್ಕೆ ಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು. ಮಾಹಿತಿ ನೀಡಿದ ಸಾರ್ವಜನಿಕರ ಹೆಸರು ಮತ್ತು ಗುರುತನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುವುದು. ಬಂದ ಮಾಹಿತಿಯನ್ನಾಧರಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್ಪಿ ಭರವಸೆ ನೀಡಿದ್ದಾರೆ.

ಅನಾಮಧೇಯವಾಗಿ ಮಾಹಿತಿ ನೀಡಿ ನಿಮ್ಮ ಸ್ನೇಹಿತರ ಹಾಗೂ ಯುವಜನರ ಭವಿಷ್ಯವನ್ನು ರಕ್ಷಿಸಿ” ಎಂದಿರುವ ನ್ಯಾಮಗೌಡರ್, ಸಾರ್ವಜನಿಕರ ಸಹಕಾರವಿಲ್ಲದೆ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾಧ್ಯವಿಲ್ಲ. ಹೀಗಾಗಿ ಮಾದಕ ದ್ರವ್ಯ ಮುಕ್ತ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯಿಂದ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...