Home ಸುದ್ದಿ ಕಲಬುರಗಿಯಲ್ಲಿ ಆ. 23 ರಿಂದ ಯುವ ಕಲಾವಿದೆ ಲಕ್ಷ್ಮೀ ಆರ್. ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ.
ಸುದ್ದಿ

ಕಲಬುರಗಿಯಲ್ಲಿ ಆ. 23 ರಿಂದ ಯುವ ಕಲಾವಿದೆ ಲಕ್ಷ್ಮೀ ಆರ್. ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ.

Share
Share
ಮರ್ಚೆಡ್ ಡೇಸ್ ಸುದ್ದಿ|ಕಲಬುರಗಿ.

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಯುವ ಚಿತ್ರಕಲಾವಿದೆ ಲಕ್ಷ್ಮೀ ಆರ್. ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ನಗರದ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ. ಆ. 23 ರಿಂದ 25, 2026 ರವರೆಗೆ ಮೂರು ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ .

ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಹಿರಿಯ ಚಿತ್ರಕಲಾವಿದ ಬಸವರಾಜ ಎಲ್. ಜಾನೆ ಅವರು ಆ. 23 ರಂದು ಬೆಳಿಗ್ಗೆ 10:30 ಗಂಟೆಗೆ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕೃತಿಕಾ ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಜಾನೆ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವ್ಹಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀಮತಿ ಶೈಲಜಾ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಲಕ್ಷ್ಮೀ ಆರ್. ಪೊದ್ದಾರ ಅವರು ರಚಿಸಿದ ಸುಮಾರು 25ಕ್ಕೂ ಹೆಚ್ಚು ವಿವಿಧ ಮಾಧ್ಯಮದ ಚಿತ್ರಕಲಾಕೃತಿಗಳು ಈ ಪ್ರದರ್ಶನದಲ್ಲಿ ಅನಾವರಣಗೊಳ್ಳಲಿವೆ. ಇವರು ಈಗಾಗಲೇ 10ಕ್ಕೂ ಹೆಚ್ಚು ರಾಜ್ಯ ಮಟ್ಟದ ಕಲಾಪ್ರದರ್ಶನ ಹಾಗೂ ಕಲಾ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಲಾ ಸ್ಪರ್ಧೆಯ ಪ್ರಶಸ್ತಿ ಸೇರಿದಂತೆ 10ಕ್ಕೂ ಹೆಚ್ಚು ವಿವಿಧ ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಆ. 23 ರಿಂದ ಆ. 25, 2026 ರವರೆಗೆ ಪ್ರತಿದಿನ ಬೆಳಿಗ್ಗೆ 10:30 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ಕಲಾ ಪ್ರದರ್ಶನವು ತೆರೆದಿರಲಿದ್ದು, ಕಲಾಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...