Home ಸುದ್ದಿ ಆನೆಗುಂದಿ ಶಾಲೆಯಲ್ಲಿ ಮೂರು ಕ್ಲಸ್ಟರ್‌ಗಳ ವಲಯ ಮಟ್ಟದ ಕ್ರೀಡಾ ಮಹೋತ್ಸವ: ಕ್ರೀಡಾಪಟುಗಳ ಅದ್ಭುತ ಪ್ರದರ್ಶನ.
ಸುದ್ದಿ

ಆನೆಗುಂದಿ ಶಾಲೆಯಲ್ಲಿ ಮೂರು ಕ್ಲಸ್ಟರ್‌ಗಳ ವಲಯ ಮಟ್ಟದ ಕ್ರೀಡಾ ಮಹೋತ್ಸವ: ಕ್ರೀಡಾಪಟುಗಳ ಅದ್ಭುತ ಪ್ರದರ್ಶನ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ತಾಣ ಆನೆಗುಂದಿಯ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೆಪ್ಟೆಂಬರ್ 3 ಮತ್ತು 4 ರಂದು ಎರಡು ದಿನಗಳ ಕಾಲ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಆನೆಗುಂದಿ, ಹಿರೇಜಂತಕಲ್ ಹಾಗೂ ಚಿಕ್ಕಜಂತಕಲ್ ಕ್ಲಸ್ಟರ್‌ಗಳ ವ್ಯಾಪ್ತಿಗೆ ಸೇರಿದ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಈ ಮಹತ್ವದ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಆನೆಗುಂದಿಯ ಗ್ರಾಮದ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಶ್ರೀ ದುರ್ಗಾದೇವಿ ಕ್ಷೇತ್ರದ ಪೀಠಾಧ್ಯಕ್ಷರಾದ ದಾಸೋಹ ರತ್ನ ಶ್ರೀ ಬ್ರಹ್ಮಯ್ಯ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಪಂದ್ಯಾವಳಿಗೆ ಅಧಿಕೃತ ಚಾಲನೆ ನೀಡಲಾಯಿತು. ಪೂಜ್ಯ ಸ್ವಾಮೀಜಿಯವರು ಕ್ರೀಡಾಪಟುಗಳಿಗೆ ಆಶೀರ್ವದಿಸಿ, ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ  ರವಿಕುಮಾರ್ ರಾಜು .ಎನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಜಯನಗರ ಸಾಮ್ರಾಜ್ಯದ ರಾಜವಂಶಸ್ಥರಾದ ಶ್ರೀಮತಿ ರತ್ನಶ್ರೀ ರಾಣಿ ಶ್ರೀ ಕೃಷ್ಣದೇವರಾಯ, ಶ್ರೀ ಹರಿಹರ ದೇವರಾಯ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಸರಸ್ವತಿ ಜೋಡಿ ಉಪಸ್ಥಿತರಿದ್ದು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ SDMC ಉಪಾಧ್ಯಕ್ಷರಾದ ಶ್ರೀಮತಿ ಎಸ್. ಶಂಕರ ಕುಮಾರಿ, ಸಮಿತಿಯ ಸರ್ವ ಸದಸ್ಯರು, ಗ್ರಾಮದ ಹಿರಿಯ ಮುಖಂಡರು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಣ ಪ್ರೇಮಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಮಾಜಿ ಅಧ್ಯಕ್ಷ-ಸದಸ್ಯರು ಭಾಗವಹಿಸಿದ್ದರು. ಜತೆಗೆ ಮೂರು ಕ್ಲಸ್ಟರ್‌ಗಳ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಮೂರು ಕ್ಲಸ್ಟರ್‌ಗಳ ಸುಮಾರು 30ಕ್ಕೂ ಹೆಚ್ಚು ಶಾಲೆಗಳಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಕ್ರೀಡಾಸ್ಫೂರ್ತಿಯಿಂದ ಸೆಣಸಾಡಿದರು. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ಆಕರ್ಷಕ ಬಹುಮಾನ, ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು.

Share
Related Articles
ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...

ಅಂಕಣಸುದ್ದಿ

ಮಿಡ್ಲ್ ಕ್ಲಾಸ್ ದೀಪಾವಳಿ: ಬೆಳಕಿನ ಹಬ್ಬದ ಹಿಂದಿರುವ ಬಜೆಟ್ ಬದುಕು.

  ಮರ್ಚೆಡ್ ಡೇಸ್ ವಿಶೇಷ ಲೇಖನ: ಕೆಲವು ವರ್ಷಗಳ ಹಿಂದಿನ ಸಂಭ್ರಮ ಈಗಿಲ್ಲ; ಆಸೆಗಳು ದೊಡ್ಡದಿವೆ,...