Home ಸುದ್ದಿ ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳ ಸುರಿಮಳೆ.
ಸುದ್ದಿ

ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳ ಸುರಿಮಳೆ.

Share
Share
ಮರ್ಚೆಡ್ ಡೇಸ್ ಸುದ್ದಿ|ಕನಕಗಿರ

ಕನಕಗಿರಿ : ತಾಲೂಕಿನ ನವಲಿ ಹೋಬಳಿಯಲ್ಲಿ 2ನೇ ಬಾರಿಗೆ ಪ್ರಜಾಸೇವಾ ಆಂದೋಲನಾ ಸಭೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಸಾರ್ವಜನಿಕರು ಹಲವಾರು ಇಲಾಖೆಗಳಿಂದ ಆಗಿರುವ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿದರು.

ನಂತರ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ. ತಸೀಲ್ದಾರ್ ಚಂದ್ರಶೇಖರ ಗಾಳಿ ಮಾತಾನಾಡಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಈಡೇರಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.

ವಿವಿಧ ಗ್ರಾಮಗಳ ರಸ್ತೆ ಹಾಗೂ ಚರಂಡಿ ವೆವಸ್ಥೆ‚ ಶಾಲೆಗಳ ಕಟ್ಟಡ‚ ಗೋಡೆಗಳು‚ ಮೈದಾನ‚ಹಾಗೂ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳು. ಮತ್ತು ಆರ್ಥಿಕವಾಗಿ ಹಿಂದುಳಿದ ಜನಗಳಿಗೆ ಗ್ರಾಮಪಂಚಾಯಿಂದ ದೋರೆಯುವ ಸೌಲಭ್ಯಗಳು ಸಿಗುತ್ತಿಲ್ಲ. ಅಂಗನವಾಡಿ ಮಕ್ಕಳಿಗೆ ಸುಸಜ್ಜಿತವಾದ ಕಟ್ಟಡ ಸಹ ಇಲ್ಲ ಶೌಚಾಲಯಗಳಿಗೆ ಹೊರವಲಯಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣದಲ್ಲಿ ಇದೆ ಇನ್ನು ಹಲವಾರು ಸಮಸ್ಯೆಗಳು ಈ ಪ್ರಜಾಸೇವಾ ಆಂದೋಲನದಲ್ಲಿ ಬೆಳಕಿಗೆ ಬಂದಿದು ಈ ಎಲ್ಲಾ ಸಾರ್ವಜನಿಕರ ಸಮಸ್ಯೆಗಳನ್ನು ಕುಂದು ಕೊರತೆಗಳನ್ನು ಯಾವ ನಿಟ್ಟಿನಲ್ಲಿ ಬಗೆಹರಿಸುತ್ತಾರೆ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಪ್ರಶ್ನೆ ಮೂಡಿದೆ

ಪ್ರಜಾಸೇವಾ ಆಂದೋಲನಾ ಶಾಭೆಯ ಮುಖ್ಯ ಉದ್ದೇಶ ನಿಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದು‚ ಜನರ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟ‚

ಯಾವುದೇ ಇಲಾಖೆಯಿಂದ ನಿಮ್ಮ ಕೆಲಸವನ್ನು ಮಾಡದೆ ಇದ್ದಲ್ಲಿ ನೇರವಾಗಿ ನನ್ನ ಗಮನಕ್ಕೆ ತನ್ನಿ ಅವರ ಮೇಲೆ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇನೆ ಮತ್ತು ಆದಷ್ಟು ಬೇಗನೆ ನಿಮ್ಮ ಸಮಸ್ಯೆಗಳನ್ನು ಬಗೆಹ ರಿಸುತ್ತೇನೆ

-ತಹಸಿಲ್ದಾರ್ ಚಂದ್ರಶೇಖರ್ ಗಾಳಿ

ಈ ಕಾರ್ಯಕ್ರಮದಲ್ಲಿ APMC ಕಾರ್ಯದರ್ಶಿ ಸಾವಿತ್ರಿ ಪಾಟೀಲ್, CPI ವೀರಣ್ಣ ಹಳ್ಳಿ, ಉಪವಲಯ ಅರಣ್ಯಾಧಿಕಾರಿ ಸುಲೇಮಾನ್, ತಾ.ಪಂ ಸಹಾಯಕ ನಿರ್ದೇಶಕರಾದ ವೀರಣ್ಣ ನಕ್ರಳ್ಳಿ, ನಾಗೇಶ್ ಸೇರಿದಂತೆ ಪೊಲೀಸ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RWS), ಪಂಚಾಯತ್ ರಾಜ್, ಆರೋಗ್ಯ, ಅರಣ್ಯ, ಅಬಕಾರಿ, ತೋಟಗಾರಿಕೆ, ಕೃಷಿ, ರೇಷ್ಮೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...