Home ಸುದ್ದಿ 50 ವರ್ಷಗಳಿಂದ ವಸತಿ ಇಲ್ಲದೆ ಅಲೆಮಾರಿ ಬದುಕು: ರಾಯಚೂರಿನಲ್ಲಿ ಸಿಂಧೋಳ್ಳು ಸಮುದಾಯದ ಬೃಹತ್ ಪ್ರತಿಭಟನೆ.
ಸುದ್ದಿ

50 ವರ್ಷಗಳಿಂದ ವಸತಿ ಇಲ್ಲದೆ ಅಲೆಮಾರಿ ಬದುಕು: ರಾಯಚೂರಿನಲ್ಲಿ ಸಿಂಧೋಳ್ಳು ಸಮುದಾಯದ ಬೃಹತ್ ಪ್ರತಿಭಟನೆ.

Share
Share
ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು:ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ, ತಲೆಮಾರುಗಳಿಂದ ಭಿಕ್ಷಾಟನೆಯನ್ನೇ ನಂಬಿ ಬದುಕುತ್ತಿರುವ ಸಿಂಧೋಳ್ಳು ಸಮುದಾಯದ ಜನರು ಶಾಶ್ವತ ವಸತಿ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ 50 ವರ್ಷಗಳಿಂದ ಸೂಕ್ತ ನೆಲೆ ಮತ್ತು ಸೂರು ಇಲ್ಲದೆ ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು. ವಸತಿ ಸೌಕರ್ಯವಿಲ್ಲದ ಕಾರಣ ಮಕ್ಕಳು ಹಾಗೂ ಯುವಕರು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಭಿಕ್ಷಾಟನೆಯೇ ಅನಿವಾರ್ಯ ವೃತ್ತಿಯಾಗುತ್ತಿದೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ, ಯುವಜನತೆಗೆ ಉತ್ತಮ ಭವಿಷ್ಯ ರೂಪಿಸಲು ಶಾಶ್ವತ ನೆಲೆ ಅತಿಮುಖ್ಯವಾಗಿದೆ ಎಂದು ಸಮುದಾಯದ ಮುಖಂಡರು ಒತ್ತಾಯಿಸಿದರು. ಸರ್ಕಾರ ಕೂಡಲೇ ಎಚ್ಚೆತ್ತು ನಿವೇಶನ ಮತ್ತು ವಸತಿ ಒದಗಿಸಿ, ತಮ್ಮನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಅವರು ಮನವಿ ಸಲ್ಲಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...