Home ಸುದ್ದಿ ಹುಲಿಹೈದರ: ಸರ್ಕಾರಿ ಪ್ರೌಢಶಾಲೆಯ ರಂಗಮಂದಿರಕ್ಕೆ ಕಿಡಿಗೇಡಿಗಳ ಬೆಂಕಿ; ₹2 ಲಕ್ಷಕ್ಕೂ ಅಧಿಕ ಮೌಲ್ಯದ ಸಾಮಗ್ರಿಗಳು ಬಸ್ಮ.
ಸುದ್ದಿ

ಹುಲಿಹೈದರ: ಸರ್ಕಾರಿ ಪ್ರೌಢಶಾಲೆಯ ರಂಗಮಂದಿರಕ್ಕೆ ಕಿಡಿಗೇಡಿಗಳ ಬೆಂಕಿ; ₹2 ಲಕ್ಷಕ್ಕೂ ಅಧಿಕ ಮೌಲ್ಯದ ಸಾಮಗ್ರಿಗಳು ಬಸ್ಮ.

Share
Share
ಮರ್ಚೆಡ್ ಡೇಸ್ ಸುದ್ದಿ|ಹುಲಿಹೈದರ.

ಕನಕಗಿರಿ (ಕೊಪ್ಪಳ):ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಗೆ ಭಾನುವಾರ ಮುಂಜಾನೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕೊಠಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ಅಂದಾಜು ₹2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.

ಭಾನುವಾರ ಬೆಳಿಗ್ಗೆ ಸುಮಾರು 6.45ರ ಸುಮಾರಿಗೆ ರಂಗಮಂದಿರದ ಕೊಠಡಿಯಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಕೆನ್ನಾಲಿಗೆ ಹೊರಹೊಮ್ಮುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರಾದರೂ, ಅಷ್ಟರಲ್ಲಾಗಲೇ ಕೊಠಡಿಯಲ್ಲಿದ್ದ ಕ್ರೀಡಾ ಇಲಾಖೆಯ ಸುಮಾರು 30 ಬಂಡಲ್ ಕಬಡ್ಡಿ ಮ್ಯಾಟ್‌ಗಳು, 2,500 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ನೀರಿನ ಟ್ಯಾಂಕ್ ಸೇರಿದಂತೆ ಇತರೆ ಬೆಲೆಬಾಳುವ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದ್ದವು.

ಶಾಲಾ ಆವರಣದಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಈ ಹಿಂದೆಯೂ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು, ನೀರಿನ ಪೈಪ್‌ಗಳು ಹಾಗೂ ಶೌಚಾಲಯದ ಬಾಗಿಲುಗಳನ್ನು ಧ್ವಂಸಗೊಳಿಸಲಾಗಿತ್ತು. ಶಾಲಾ ಕಚೇರಿಯಲ್ಲಿ 32 ವರ್ಷಗಳ ಹಳೆಯ ವಿದ್ಯಾರ್ಥಿಗಳ ಅಮೂಲ್ಯ ದಾಖಲೆಗಳಿದ್ದು, ಪುಂಡರ ದುಷ್ಕೃತ್ಯದಿಂದ ದಾಖಲೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಕೂಡಲೇ ಶಾಲೆಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಿ, ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಎಂ. ಸಕ್ರಿ ಅವರು ಕನಕಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

***********************************

ಮರ್ಚೆಡ್ ಡೇಸ್ ಕನ್ನಡ ದಿನಪತ್ರಿಕೆ ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ ಕನಕಪ್ಪ ವರದಿಗಾರರು ಕನಕಗಿರಿ: 7975942506.

 

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...