Home ಸುದ್ದಿ ​ಸಿಂಧನೂರಿನಲ್ಲಿ ಭೀಕರ ಅಗ್ನಿ ದುರಂತ: ‘ಅಭಿ ಮೋಟಾರ್ಸ್’ ಶೋರೂಂ, ಗ್ಯಾರೇಜ್‌ಗಳಿಗೆ ಬೆಂಕಿ, 8 ಬೈಕ್‌ಗಳು ಸುಟ್ಟು ಕರಗಲು.
ಸುದ್ದಿ

​ಸಿಂಧನೂರಿನಲ್ಲಿ ಭೀಕರ ಅಗ್ನಿ ದುರಂತ: ‘ಅಭಿ ಮೋಟಾರ್ಸ್’ ಶೋರೂಂ, ಗ್ಯಾರೇಜ್‌ಗಳಿಗೆ ಬೆಂಕಿ, 8 ಬೈಕ್‌ಗಳು ಸುಟ್ಟು ಕರಗಲು.

Share
Share
ಮರ್ಚೆಡ್ ಡೇಸ್ ಸುದ್ದಿ|ಸಿಂಧನೂರು.

ಸಿಂಧನೂರು: ಗಂಗಾವತಿ ಮುಖ್ಯ ರಸ್ತೆಯಲ್ಲಿರುವ ‘ಅಭಿ ಮೋಟಾರ್ಸ್’ ಬೈಕ್ ಶೋರೂಂನಲ್ಲಿ ಆಕಸ್ಮಿಕವಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂಗಡಿಯಿಂದ ಏಕಾಏಕಿ ಬೆಂಕಿಯ ಜ್ವಾಲೆಗಳು ಹಾಗೂ ದಟ್ಟ ಹೊಗೆ ಆಕಾಶಕ್ಕೆ ಚಿಮ್ಮುತ್ತಿದ್ದಂತೆ ಸುತ್ತಮುತ್ತಲಿನ ಜನರು ಗಾಬರಿಗೊಂಡರು.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಪರಿಣಾಮವಾಗಿ, ಅದು ಕೇವಲ ಶೋರೂಂಗೆ ಮಾತ್ರ ಸೀಮಿತವಾಗಿರದೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಅಭಿ ಮೋಟಾರ್ಸ್ ಪಕ್ಕದಲ್ಲೇ ಇದ್ದ ಆಟೋಮೊಬೈಲ್ಸ್ ಹಾಗೂ ವೆಲ್ಡಿಂಗ್ ಗ್ಯಾರೇಜ್‌ಗೂ ಬೆಂಕಿ ಹೊತ್ತಿಕೊಂಡಿದ್ದು, ದೊಡ್ಡ ಮಟ್ಟದ ಹಾನಿ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಅಭಿ ಮೋಟಾರ್ಸ್‌ನಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 8 ಬೈಕ್‌ಗಳು ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿವೆ. ಇದರೊಂದಿಗೆ ಬೈಕ್ ಬಿಡಿಭಾಗಗಳು ಸುಟ್ಟು ಕರಕಲಾಗಿವೆ.

ಅಷ್ಟೇ ಅಲ್ಲದೆ, ಶೋರೂಂ ಒಳಗಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಬ್ಯಾಟರಿಗಳು ಹಾಗೂ ಇತರ ಬೆಲೆಬಾಳುವ ಉಪಕರಣಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಒಟ್ಟಾರೆಯಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ನಾಶವಾಗಿವೆ.

ಘಟನಾ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡಲಾಯಿತು. ಈ ಅಗ್ನಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...