Home ಸುದ್ದಿ ಬಳ್ಳಾರಿಯಲ್ಲಿ ಮಧ್ಯರಾತ್ರಿ ಮಹಿಳಾ ಗ್ಯಾಂಗ್ ಓಡಾಟ: ಕಳ್ಳತನದ ಶಂಕೆ, ಸಿಸಿಟಿವಿಯಲ್ಲಿ ಚಲನವಲನ ಸೆರೆ.
ಸುದ್ದಿ

ಬಳ್ಳಾರಿಯಲ್ಲಿ ಮಧ್ಯರಾತ್ರಿ ಮಹಿಳಾ ಗ್ಯಾಂಗ್ ಓಡಾಟ: ಕಳ್ಳತನದ ಶಂಕೆ, ಸಿಸಿಟಿವಿಯಲ್ಲಿ ಚಲನವಲನ ಸೆರೆ.

Share
Share

ಮರ್ಚೆಡ್ ಡೇಸ್ ಸುದ್ದಿ|ಬಳ್ಳಾರಿ.

ಬಳ್ಳಾರಿ: ನಗರದ ಪ್ರಮುಖ ಬಡಾವಣೆಗಳಲ್ಲಿ ಮಧ್ಯರಾತ್ರಿ ಅಪರಿಚಿತ ಮಹಿಳೆಯರ ಗುಂಪೊಂದು ಅನುಮಾನಾಸ್ಪದವಾಗಿ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ನಗರವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ನಗರದ ಇನ್ನಾ ರೆಡ್ಡಿ ಕಾಲೋನಿ ಹಾಗೂ ಮಂಗಮ್ಮ ಕ್ಯಾಂಪ್ ವ್ಯಾಪ್ತಿಯಲ್ಲಿ ಈ ಚಟುವಟಿಕೆಗಳು ಬೆಳಕಿಗೆ ಬಂದಿದ್ದು, ಮಹಿಳಾ ಕಳ್ಳರ ಗ್ಯಾಂಗ್ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ಶಂಕೆ ವ್ಯಕ್ತವಾಗಿದೆ.

ಕನಕ ದುರ್ಗಮ್ಮ ದೇವಸ್ಥಾನದ ರಸ್ತೆ, ಗಂಗಮ್ಮ ಕ್ಯಾಂಪ್ ಬಳಿಯ ಪೆಟ್ರೋಲ್ ಬಂಕ್ ಹಾಗೂ ಇನ್ನಾ ರೆಡ್ಡಿ ಕಾಲೋನಿ ಸುತ್ತಮುತ್ತಲಿನ ರಸ್ತೆಗಳಲ್ಲಿ ತಡರಾತ್ರಿ ಈ ಮಹಿಳೆಯರ ತಂಡ ಸಂಚರಿಸಿದೆ. ನಿರ್ಜನ ರಸ್ತೆಗಳಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ, ಮನೆಗಳ ಕಡೆಗೆ ಅನುಮಾನಾಸ್ಪದವಾಗಿ ವೀಕ್ಷಿಸುತ್ತಾ ಸಾಗುತ್ತಿರುವ ಈ ತಂಡದ ಚಲನವಲನ ಸ್ಥಳೀಯರಲ್ಲಿ ತೀವ್ರ ಕಳವಳವನ್ನುಂಟುಮಾಡಿದೆ.

ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳಲ್ಲಿ ಮಹಿಳೆಯರು ಮುಖಕ್ಕೆ ಬಟ್ಟೆ ಧರಿಸಿಕೊಂಡು ಓಡಾಡುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ರಾತ್ರಿ ವೇಳೆ ತಮ್ಮ ಮನೆಗಳು ಹಾಗೂ ಬೆಲೆಬಾಳುವ ಆಸ್ತಿಪಾಸ್ತಿಗಳ ಸುರಕ್ಷತೆಯ ಬಗ್ಗೆ ನಾಗರಿಕರು ಚಿಂತಾಕ್ರಾಂತರಾಗಿದ್ದಾರೆ.

ಘಟನೆ ಕುರಿತಂತೆ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಈ ಮಹಿಳೆಯರ ಹಿನ್ನೆಲೆಯನ್ನು ಪತ್ತೆಹಚ್ಚುವ ಮೂಲಕ ರಾತ್ರಿ ಗಸ್ತು ಚುರುಕುಗೊಳಿಸಬೇಕೆಂದು ಸಾರ್ವಜನಿಕರು ಬಲವಾಗಿ ಒತ್ತಾಯಿಸಿದ್ದಾರೆ.

ನಗರದ ನಿವಾಸಿಗಳು ತಡರಾತ್ರಿ ಅಪರಿಚಿತರ ಓಡಾಟ ಕಂಡುಬಂದರೆ ಜಾಗೃತರಾಗಿರಬೇಕು ಹಾಗೂ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಸ್ಥಳೀಯ ಹಿರಿಯರು ಮನವಿ ಮಾಡಿದ್ದಾರೆ. ಮಹಿಳೆಯರ ತಂಡ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಅಥವಾ ಬಂಧನದ ಕುರಿತು ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬೀಳಬೇಕಿದೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...