Home ಸುದ್ದಿ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಆರಂಭದಿಂದಲೇ ಶಶೀಲ್ ನಮೋಶಿ ಭರ್ಜರಿ ಗೆಲವು, ಬೆಂಬಲಿಗರ ವಿಜಯೋತ್ಸವ.
ಸುದ್ದಿ

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಆರಂಭದಿಂದಲೇ ಶಶೀಲ್ ನಮೋಶಿ ಭರ್ಜರಿ ಗೆಲವು, ಬೆಂಬಲಿಗರ ವಿಜಯೋತ್ಸವ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಕಲಬುರಗಿ.

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಭಾಸ್ಕರ್ ಸಭಾಂಗಣದಲ್ಲಿ ಅತ್ಯಂತ ಬಿಗಿ ಭದ್ರತೆಯೊಂದಿಗೆ ನಡೆಯಿತು. ಒಟ್ಟು 14 ಟೇಬಲ್‌ಗಳಲ್ಲಿ ಮತಗಳ ಎಣಿಕೆ ಕಾರ್ಯ ವ್ಯವಸ್ಥಿತವಾಗಿ ಆರಂಭಗೊಂಡಿದ್ದು, ಮೊದಲ ಸುತ್ತಿನಿಂದಲೇ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ತಮ್ಮ ಪ್ರತಿಸ್ಪರ್ಧಿಗಳ ಎದುರು ಬೃಹತ್ ಮುನ್ನಡೆ ಕಾಯ್ದುಕೊಂಡು ಗಮನ ಸೆಳೆದರು.

ಮೊದಲ ಸುತ್ತಿನಲ್ಲಿ ಒಟ್ಟು 14,001 ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿತ್ತು. ಇದರಲ್ಲಿ 13,183 ಮತಗಳು ಸಿಂಧುಗೊಂಡರೆ, ಬರೋಬ್ಬರಿ 818 ಮತಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡವು. ಆರಂಭಿಕ ಹಂತದಲ್ಲಿಯೇ ಸಿಂಧು ಮತಗಳಲ್ಲಿ ನಮೋಶಿ ಅವರು ಸ್ಪಷ್ಟ ಮೇಲುಗೈ ಸಾಧಿಸುವ ಮೂಲಕ ವಿಜಯದ ಮುನ್ಸೂಚನೆ ನೀಡಿದರು.

ಪ್ರಾಶಸ್ತ್ಯದ ಮತಗಳ ಎಣಿಕೆಯ ಮೊದಲ ಸುತ್ತಿನ ಅಂತ್ಯದ ವೇಳೆಗೆ ನಮೋಶಿ ಅವರು ಒಟ್ಟು 7,243 ಮತಗಳನ್ನು ಕಲೆಹಾಕಿದರು. ತಮ್ಮ ಸಮೀಪದ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿ ಮುನ್ನುಗ್ಗಿದರು. ಆ ವೇಳೆಗೆ ಶರಣಪ್ಪ ಮಟ್ಟೂರು ಅವರು 5,714 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದರು.

ಎರಡನೇ ಸುತ್ತಿನಲ್ಲೂ ನಮೋಶಿ ಅವರ ಗೆಲುವಿನ ನಾಗಾಲೋಟ ಮುಂದುವರಿಯಿತು. ಎರಡನೇ ಸುತ್ತಿನಲ್ಲಿ ಮತ್ತೆ 7,288 ಮತಗಳನ್ನು ಬಾಚಿಕೊಂಡ ನಮೋಶಿ, ಒಟ್ಟು 14,531 ಮತಗಳನ್ನು ಪಡೆದುಕೊಂಡರು. ಈ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಶರಣಪ್ಪ ಮಟ್ಟೂರು ಅವರಿಗಿಂತ ಬರೋಬ್ಬರಿ 3,232 ಮತಗಳ ಅಂತರದ ಬೃಹತ್ ಮುನ್ನಡೆಯನ್ನು ಪಡೆದು ಗೆಲುವನ್ನು ಇನ್ನಷ್ಟು ಗಟ್ಟಿಗೊಳಿಸಿದರು.

ಫಲಿತಾಂಶದಲ್ಲಿ ನಮೋಶಿ ಅವರ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆಯೇ, ಮತ ಎಣಿಕೆ ಕೇಂದ್ರದ ಹೊರಗೆ ಹಾಗೂ ಪಕ್ಷದ ಪಾಳೆಯದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿತು. ನಮೋಶಿ ಬೆಂಬಲಿಗರು ಜಯಘೋಷ ಮೊಳಗಿಸುತ್ತಾ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಪ್ರಮುಖ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿ ವಿಜಯದ ಹರ್ಷ ಹಂಚಿಕೊಂಡರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...