Home ಸುದ್ದಿ ಆಮೆಯ ಅಂತ್ಯಸಂಸ್ಕಾರಕ್ಕೆ ಅಂಗಳ ಅಗೆದ ಮಕ್ಕಳಿಗೆ ಸಿಕ್ಕಿತು ಪ್ರಾಚೀನ ನಾಣ್ಯಗಳ ನಿಧಿ.
ಸುದ್ದಿ

ಆಮೆಯ ಅಂತ್ಯಸಂಸ್ಕಾರಕ್ಕೆ ಅಂಗಳ ಅಗೆದ ಮಕ್ಕಳಿಗೆ ಸಿಕ್ಕಿತು ಪ್ರಾಚೀನ ನಾಣ್ಯಗಳ ನಿಧಿ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಚಿತ್ರದುರ್ಗ.

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಅಚ್ಚರಿಯ ಘಟನೆ – ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ನಾಣ್ಯಗಳು ಪುರಾತತ್ವ ಇಲಾಖೆಯ ವಶಕ್ಕೆ ಮನೆಯಲ್ಲಿದ್ದ ಆಮೆ ಮೃತಪಟ್ಟ ಹಿನ್ನೆಲೆಯಲ್ಲಿ ಅದರ ಅಂತ್ಯಸಂಸ್ಕಾರ ನೆರವೇರಿಸಲು ಮನೆಯ ಅಂಗಳದಲ್ಲಿ ನೆಲ ಅಗೆಯುತ್ತಿದ್ದ ಮಕ್ಕಳಿಗೆ ಪ್ರಾಚೀನ ನಾಣ್ಯಗಳ ನಿಧಿ ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಂಗಮ್ಮ ಎಂಬುವವರ ಮನೆಯಲ್ಲಿ ಈ ಅಚ್ಚರಿಯ ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ಆಮೆ ಮೃತಪಟ್ಟಿದ್ದರಿಂದ ಅದರ ಅಂತ್ಯಸಂಸ್ಕಾರಕ್ಕಾಗಿ ಮಕ್ಕಳು ಮನೆಯ ಅಂಗಳದಲ್ಲಿ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ನೆಲದೊಳಗೆ ಹಳೆಯ ಮಣ್ಣಿನ ಕುಡಿಕೆ ಪತ್ತೆಯಾಗಿದೆ.

ಕುತೂಹಲದಿಂದ ಮಣ್ಣಿನ ಕುಡಿಕೆಯನ್ನು ತೆರೆದು ನೋಡಿದಾಗ ಅದರೊಳಗೆ ಪ್ರಾಚೀನ ಕಾಲದ ನಾಣ್ಯಗಳು ಇರುವುದು ಕಂಡುಬಂದಿದೆ. ಇದರಿಂದ ಅಚ್ಚರಿಗೊಂಡ ಮಕ್ಕಳು ಹಾಗೂ ಮನೆಯವರು ಈ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ಮಕ್ಕಳಿಗೆ ಮಣ್ಣಿನ ಕುಡಿಕೆಯಲ್ಲಿ ಹಳೆಯ ನಾಣ್ಯಗಳು ಸಿಕ್ಕಿರುವ ಸುದ್ದಿ ಗ್ರಾಮದಲ್ಲಿ ಕ್ಷಣಾರ್ಧದಲ್ಲಿ ಹರಡುತ್ತಿದ್ದಂತೆ, ಸ್ಥಳದಲ್ಲಿ ಕುತೂಹಲ ಹೆಚ್ಚಾಯಿತು. ನಿಧಿ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಣ್ಯಗಳನ್ನು ವೀಕ್ಷಿಸಿದರು.

ಘಟನೆಯ ಮಾಹಿತಿ ತಿಳಿದ ಕೂಡಲೇ ಚಳ್ಳಕೆರೆ ತಾಲೂಕು ತಹಸೀಲ್ದಾರ್ ರಹೇನ್ ಪಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಈ ಕುರಿತು ಪುರಾತತ್ವ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪತ್ತೆಯಾದ ಪ್ರಾಚೀನ ನಾಣ್ಯಗಳು ಹಾಗೂ ಮಣ್ಣಿನ ಕುಡಿಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪತ್ತೆಯಾಗಿರುವ ನಾಣ್ಯಗಳು ಯಾವ ಕಾಲಕ್ಕೆ ಸೇರಿವೆ, ಅವುಗಳ ಐತಿಹಾಸಿಕ ಮಹತ್ವವೇನು ಎಂಬುದರ ಕುರಿತು ಪುರಾತತ್ವ ಇಲಾಖೆಯ ಪರಿಶೀಲನೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಆಮೆಯ ಅಂತ್ಯಸಂಸ್ಕಾರಕ್ಕೆಂದು ಅಂಗಳ ಅಗೆದ ಮಕ್ಕಳಿಗೆ ಅನಿರೀಕ್ಷಿತವಾಗಿ ಪ್ರಾಚೀನ ನಾಣ್ಯಗಳ ನಿಧಿ ಸಿಕ್ಕಿರುವ ಈ ಘಟನೆ ಗೋಪನಹಳ್ಳಿ ಗ್ರಾಮದಲ್ಲಿ ಭಾರಿ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...