Home ಸುದ್ದಿ ಗಿಣಿಗೇರಾ ಬಳಿ ಲಾರಿ-ಬೈಕ್ ಅಪಘಾತದಿಂದ; ತಂದೆ ಸೇರಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು.
ಸುದ್ದಿ

ಗಿಣಿಗೇರಾ ಬಳಿ ಲಾರಿ-ಬೈಕ್ ಅಪಘಾತದಿಂದ; ತಂದೆ ಸೇರಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು.

Share
Share

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತವರು ಮನೆಗೆ ತೆರಳಿದ್ದ ಪತ್ನಿಯನ್ನು ಕರೆತರಲು ಹೋದ ಪತಿ, ಅಲ್ಲಿಯೂ ಜಗಳವಾಡಿ ಮಕ್ಕಳನ್ನು ಬೈಕ್‌ನಲ್ಲಿ ಕರೆದುಕೊಂಡು ವಾಪಸ್ ಬರುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಇಬ್ಬರು ಮುಗ್ಧ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗಣಿಗೇರ ಬಳಿ ಶನಿವಾರ ತಡರಾತ್ರಿ ನಡೆದಿದೆ. ಗಂಗಾವತಿ ನಗರದ ಅಣ್ಣೂರ ಗೌರಮ್ಮ ಕ್ಯಾಂಪ್ ನಿವಾಸಿ, ಖಾಸಗಿ ವಾಹನ ಚಾಲಕರಾಗಿ ವೃತ್ತಿ ಮಾಡುತ್ತಿದ್ದ ಅಮರ್ ಚೌಸ್ (32), ಆತನ ಪುತ್ರ ಅಮ್ಮನ್ (9) ಹಾಗೂ ( 6) ವರ್ಷದ ಪುತ್ರಿ ಸ್ಥಳದಲ್ಲೇ ಅಸುನೀಗಿದ ದುರ್ದೈವಿಗಳು.

ಕೆಲವು ದಿನಗಳ ಹಿಂದೆ ಅಮರ್ ಚೌಸ್ ಹಾಗೂ ಆತನ ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಕೌಟುಂಬಿಕ ಜಗಳ ನಡೆದಿತ್ತು. ಗಂಡನೊಂದಿಗೆ ಮುನಿಸಿಕೊಂಡಿದ್ದ ಪತ್ನಿ ಕೊಪ್ಪಳದಲ್ಲಿದ್ದ ತನ್ನ ತವರು ಮನೆಗೆ ತೆರಳಿದ್ದಳು. ಶನಿವಾರ ರಾತ್ರಿ ಪತ್ನಿಯನ್ನು ಮನವೊಲಿಸಿ ವಾಪಸ್ ಕರೆದೊಯ್ಯಲು ಅಮರ್ ಕೊಪ್ಪಳಕ್ಕೆ ತೆರಳಿದ್ದನು. ಆದರೆ ಅಲ್ಲಿಯೂ ದಂಪತಿ ನಡುವೆ ಮತ್ತೆ ವಾಗ್ವಾದ ನಡೆದಿದ್ದು, ಕೋಪಗೊಂಡ ಅಮರ್ ‘ನನ್ನ ಮಕ್ಕಳನ್ನು ನಾನೇ ಕರೆದುಕೊಂಡು ಹೋಗುತ್ತೇನೆ’ ಎಂದು ಹಠಹಿಡಿದು ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಗಂಗಾವತಿಯತ್ತ ಪ್ರಯಾಣ ಬೆಳೆಸಿದ್ದನು.

ಕೊಪ್ಪಳ-ಗಂಗಾವತಿ ಮುಖ್ಯ ರಸ್ತೆಯ ಗಣಿಗೇರ ಸಮೀಪ ಮಧ್ಯರಾತ್ರಿ ಸುಮಾರು 12 ಗಂಟೆಯ ಸುಮಾರಿಗೆ ಇವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಎದುರಿನಿಂದ ಕೊಪ್ಪಳ ಕಡೆಗೆ ತೆರಳುತ್ತಿದ್ದ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ತಂದೆ ಹಾಗೂ ಇಬ್ಬರು ಮಕ್ಕಳು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗಳಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಡುರಾತ್ರಿಯ ರಸ್ತೆ ಅಪಘಾತದ ಭೀಕರತೆಗೆ ಹೆದ್ದಾರಿಯುದ್ದಕ್ಕೂ ರಕ್ತ ಚೆಲ್ಲಿ ಇಡೀ ಪರಿಸರ ಕರುಳು ಹಿಂಡುವಂತಿತ್ತು.

ವಿಷಯ ತಿಳಿದ ತಕ್ಷಣವೇ ಕೊಪ್ಪಳ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಮುಗಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...