Home ಸುದ್ದಿ ಕರವೇ ಯುವಶಕ್ತಿ ರಾಜ್ಯಾಧ್ಯಕ್ಷ ಆರ್. ವಿಜಯ್ ಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಪಿ. ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಅರ್ಥಪೂರ್ಣ ರಾಜ್ಯೋತ್ಸವ: ರೋಗಿಗಳಿಗೆ ಹಣ್ಣು-ಹಾಲು ವಿತರಣೆ.
ಸುದ್ದಿ

ಕರವೇ ಯುವಶಕ್ತಿ ರಾಜ್ಯಾಧ್ಯಕ್ಷ ಆರ್. ವಿಜಯ್ ಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಪಿ. ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಅರ್ಥಪೂರ್ಣ ರಾಜ್ಯೋತ್ಸವ: ರೋಗಿಗಳಿಗೆ ಹಣ್ಣು-ಹಾಲು ವಿತರಣೆ.

Share
Share

ಮರ್ಚೆಡ್ ಡೇಸ್ ಸುದ್ದಿ|ವಿಜಯನಗರ (ಹೊಸಪೇಟೆ)

ಹೊಸಪೇಟೆ: ಕರ್ನಾಟಕ ರಕ್ಷಣಾ ವೇದಿಕೆ ಯುವಶಕ್ತಿ ಸಂಘಟನೆಯ ವತಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಜನಪರ ಸೇವೆಯೊಂದಿಗೆ ಆಚರಿಸಲಾಯಿತು. ಕರವೇ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್. ವಿಜಯ್ ಕುಮಾರ್ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಪಿ. ಭಾಸ್ಕರ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಹೊಸಪೇಟೆಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು-ಹಂಪಲು ಹಾಗೂ ಪೌಷ್ಟಿಕ ಆಹಾರವನ್ನು ವಿತರಿಸಲಾಯಿತು. ಆಸ್ಪತ್ರೆಯ ವಾರ್ಡ್‌ಗಳಿಗೆ ತೆರಳಿದ ಮುಖಂಡರು ರೋಗಿಗಳ ಯೋಗಕ್ಷೇಮ ವಿಚಾರಿಸಿ, ಎಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ನೊಂದವರ ಕಣ್ಣೀರೊರೆಸುವ ಮೂಲಕ ನಾಡಹಬ್ಬವನ್ನು ಆಚರಿಸಿದ ಈ ಕಾರ್ಯವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ವೇಳೆ ಜಂಟಿಯಾಗಿ ಮಾತನಾಡಿದ ರಾಜ್ಯಾಧ್ಯಕ್ಷ ಆರ್. ವಿಜಯ್ ಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಪಿ. ಭಾಸ್ಕರ್ ನಾಯಕ್, “ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಸಂರಕ್ಷಣೆಗಾಗಿ ಕರವೇ ಯುವಶಕ್ತಿ ಸಂಘಟನೆಯು ನಿರಂತರವಾಗಿ ಶ್ರಮಿಸುತ್ತಿದೆ. ಕನ್ನಡಿಗರ ಹಕ್ಕುಗಳಿಗೆ ಹಾಗೂ ತಾಯ್ನಾಡಿನ ಗೌರವಕ್ಕೆ ಧಕ್ಕೆ ಬಂದಾಗ ನಮ್ಮ ಸಂಘಟನೆ ಬೀದಿಗಿಳಿದು ರಾಜಿರಹಿತ ಹೋರಾಟ ನಡೆಸಲು ಸದಾ ಸಿದ್ಧವಿದೆ,” ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಹೊಸಪೇಟೆ ಹಾಗೂ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳ ಕರವೇ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳು, ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿ ರಾಜ್ಯೋತ್ಸವದ ಜಯಘೋಷ ಮೊಳಗಿಸಿ ಇದೇ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳು ತಿಳಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...