ಮರ್ಚೇಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ: ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಕಳೆದ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಡಿಇಒ (DEO) ಸಿಬ್ಬಂದಿಯಾಗಿ ಚೀಟಿ ಕೌಂಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಾಣೇಶ್ ಬಾಗೇವಾಡಿ (32) ಎಂಬುವವರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತ ಪ್ರಾಣೇಶ್ ಅವರು ಅದೇ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹ ಉದ್ಯೋಗಿಯೊಬ್ಬರನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಪ್ರೇಮ ವಿಫಲವಾದ ಹಿನ್ನೆಲೆಯಲ್ಲಿ ತೀವ್ರ ಮನನೊಂದು ಅವರು ಈ ಕಠಿಣ ನಿರ್ಧಾರಕ್ಕೆ ಮುಂದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ಹೆಚ್ಚಿನ ತನಿಖೆಯ ನಂತರವಷ್ಟೇ ತಿಳಿದುಬರಬೇಕಾಗಿದೆ