ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗವಿಸಿದ್ದೇಶ್ವರ ಕಾಲೇಜಿಗೆ ದ್ವಿತೀಯ ಸ್ಥಾನ.ಅಂತರಕಾಲೇಜು ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿಗೆ ಶ್ರೀರಾಮನಗರದ ಜನತೆಯ ಕ್ರೀಡಾಭಿಮಾನವೇ ಕಾರಣ: ಡಾ. ಕರಿಗೂಳಿ.
ಗಂಗಾವತಿ: ಶ್ರೀರಾಮನಗರ: “ಗ್ರಾಮದ ಕ್ರೀಡಾಪ್ರೇಮಿಗಳು, ವಾಲಿಬಾಲ್ ಆಟಗಾರರು ಹಾಗೂ ಶಿಕ್ಷಣಾಸಕ್ತರ ಸಹಕಾರದಿಂದ ಅಂತರಕಾಲೇಜು ವಾಲಿಬಾಲ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಯಿತು. ಇಲ್ಲಿನ ಜನತೆಯ ಕ್ರೀಡಾಭಿಮಾನ ನಿಜಕ್ಕೂ ಶ್ಲಾಘನೀಯ” ಎಂದು ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಗೂಳಿ ಅಭಿವ್ಯಕ್ತಪಡಿಸಿದರು.
ಇಲ್ಲಿನ ಚಿಲುಕೂರಿ ನಾಗೇಶ್ವರ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನವೆಂಬರ್ 17 ಮತ್ತು 18ರಂದು ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಅಂತರಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಜರುಗಿತು. ಎರಡು ದಿನಗಳ ಕಾಲ ನಡೆದ ಈ ರೋಚಕ ಕ್ರೀಡಾಕೂಟದಲ್ಲಿ ವಿವಿಧ ಕಾಲೇಜುಗಳ ತಂಡಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದವು.
ಅಂತಿಮ ಹಣಾಹಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಪ್ರಥಮ ದರ್ಜೆ ಕಾಲೇಜು ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡರೆ, ತೀವ್ರ ಪೈಪೋಟಿ ನೀಡಿದ ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜು ತಂಡವು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪಂದ್ಯಾವಳಿಯ ಯಶಸ್ಸಿಗೆ ಶ್ರಮಿಸಿದ ಸ್ಥಳೀಯ ಕ್ರೀಡಾಭಿಮಾನಿಗಳು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕಾಲೇಜು ಸಿಬ್ಬಂದಿಗೆ ಪ್ರಾಂಶುಪಾಲರು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.