Home ಸುದ್ದಿ ರಾಜ್ಯ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಗೆ ಗಂಗಾವತಿಯ ಕುಮಾರಿ ಸೌಜನ್ಯ ಆಯ್ಕೆ.
ಸುದ್ದಿ

ರಾಜ್ಯ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಗೆ ಗಂಗಾವತಿಯ ಕುಮಾರಿ ಸೌಜನ್ಯ ಆಯ್ಕೆ.

Share
Share

 

ಮರ್ಚೇಡ್ ಡೇಸ್ ಸುದ್ದಿ|ಗಂಗಾವತಿ.
 ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ  ಉತ್ತಮ ಸಾಧನೆ; ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೀರ್ತಿ.

ಗಂಗಾವತಿ, ನವೆಂಬರ್ 19: ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್‌.ಸಿ (B.Sc) ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರು ರಾಜ್ಯ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಸೌಜನ್ಯ ಅವರು, ಇದೀಗ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಒಟ್ಟು 224 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ತಾಲೂಕುಗಳಿಂದ ಆಯ್ಕೆಯಾದ 50 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಅವರಲ್ಲಿ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕುಮಾರಿ ಸೌಜನ್ಯ ಅವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯ ಮಟ್ಟದ ಯುವ ಸಂಸತ್ ಕಲಾಪ ಸ್ಪರ್ಧೆಗೆ ಆಯ್ಕೆಯಾಗಿರುವುದು ವಿಶೇಷವಾಗಿದೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ್ ಗುರಿಕಾರ, ಹರ್ಷ ವ್ಯಕ್ತಪಡಿಸಿ, ಶುಭ ಕೋರಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮಂಜುನಾಥ್ ಕೆ. ಎಚ್, ಸಹಾಯಕ ಪ್ರಾಧ್ಯಾಪಕ ಫಣಿರಾಜ್ ಬಾರೀಕೆರ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ, ಶೈಕ್ಷಣಿಕ ಸಂಯೋಜಕರು ಹಾಗೂ ಸಿಬ್ಬಂದಿ ವರ್ಗ, ಶುಭಕೋರಿ ಅಭಿನಂದಿಸಿದ್ದಾರೆ.

ಮರ್ಚೇಡ್ ಡೇಸ್ :
ಸಂಪರ್ಕಿಸಿ: 7975090443 | ಇಮೇಲ್: marcheddays@gmail.com
Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...